ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಬೈಕ್‌ ಸವಾರ ಸಾವು

Last Updated 28 ಏಪ್ರಿಲ್ 2019, 19:36 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ರಾಷ್ಟ್ರೀಯ ಹೆದ್ದಾರಿ ನಾಲ್ಕರ ಕೆರೆಕತ್ತಿಗನೂರು ಗೇಟ್ ಸಮೀಪ ಬೈಕ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಹೆಗ್ಗುಂದ ಗ್ರಾಮದ ಕಾಂತರಾಜು(32) ಮೃತಪಟ್ಟಿದ್ದಾರೆ.

ಶನಿವಾರ ರಾತ್ರಿ ಸುಮಾರು 9 ಗಂಟೆಗೆ ಈ ಅಪಘಾತ ಸಂಭವಿಸಿದೆ. ಕಾಂತರಾಜು ಅವರು ನೆಲಮಂಗಲದ ಕೆಬಿಡಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಮರಳುವಾಗ ದುರ್ಘಟನೆ ನಡೆದಿದೆ.

ಅಪಘಾತದ ನಂತರ ಚಾಲಕ ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರಿಗೆ ಮದುವೆಯಾಗಿದ್ದು 5 ವರ್ಷದ ಹೆಣ್ಣು ಮಗುವಿದೆ. ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT