ಕೃಷ್ಣ ಬೈರೇಗೌಡ ವಿರುದ್ಧ ಬಿಜೆಪಿ ದೂರು

ಶನಿವಾರ, ಏಪ್ರಿಲ್ 20, 2019
29 °C
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ

ಕೃಷ್ಣ ಬೈರೇಗೌಡ ವಿರುದ್ಧ ಬಿಜೆಪಿ ದೂರು

Published:
Updated:
Prajavani

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಬೈರೇಗೌಡ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿರುವುದಾಗಿ ಕೃಷ್ಣ ಬೈರೇಗೌಡ ಪ್ರಚಾರ ಮಾಡುತ್ತಿದ್ದಾರೆ. ಇದು ನೀತಿಸಂಹಿತೆಯ ಉಲ್ಲಂಘನೆ ಎಂದು ದೂರಿದೆ. ವಿಧಾನ ಪರಿಷತ್‌ ಸದಸ್ಯ ವೈ.ಎ. ನಾರಾಯಣಸ್ವಾಮಿ ನೇತೃತ್ವದ ನಿಯೋಗವು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಮಂಗಳವಾರ ದೂರು ನೀಡಿತು.

ಬಿಜೆಪಿ ಮುಖಂಡ ತುಳಸಿ ಮುನಿರಾಜು ಗೌಡ ಮಾತನಾಡಿ, ‘ಯಶವಂತಪುರದ ಎಸಿಪಿ ರವಿ‌ಪ್ರಸಾದ್, ಇನ್‌ಸ್ಪೆಕ್ಟರ್‌ಗಳಾದ ಮುದ್ದುರಾಜ್, ಶಿವಾರೆಡ್ಡಿ, ಶ್ರೀನಿವಾಸ್ ಚುನಾವಣಾ ಅಕ್ರಮಗಳಿಗೆ ಸಹಕಾರ ನೀಡುತ್ತಿದ್ದು, ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಇವರ ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಈಗಲಾದರೂ ವರ್ಗಾವಣೆ ಮಾಡಬೇಕು’ ಎಂದು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 1

  Frustrated
 • 8

  Angry

Comments:

0 comments

Write the first review for this !