ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಲ್ಮೆಟ್ ಧರಿಸಿ ಪ್ರತಿಭಟನೆ

Last Updated 14 ಫೆಬ್ರುವರಿ 2019, 20:46 IST
ಅಕ್ಷರ ಗಾತ್ರ

ಬೆಂಗಳೂರು: ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿದ ದಾಳಿಯನ್ನು ಖಂಡಿಸಿ ಬಿಜೆಪಿಯ ಯುವ ಮೋರ್ಚಾ ಕಾರ್ಯಕರ್ತರು ಹೆಲ್ಮೆಟ್ ಧರಿಸಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಬೆಳಿಗ್ಗೆ ಸೇರಿದ್ದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಪಕ್ಷದ ವಿರುದ್ಧ ಘೋಷಣೆ ಕೂಗಿದರು.

‘ಕುಮಾರಸ್ವಾಮಿ ಹಾಗೂ ಸಚಿವ ರೇವಣ್ಣ ಅವರ ಕುಮ್ಮಕ್ಕಿನಿಂದಲೇ ಜೆಡಿಎಸ್ ಕಾರ್ಯಕರ್ತರು, ಶಾಸಕಪ್ರೀತಂ ಗೌಡ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಗಲಾಟೆ ಮಾಡಿದ್ದಾರೆ. ಇದನ್ನು ನಾವೆಲ್ಲರೂ ಖಂಡಿಸುತ್ತೇವೆ’ ಎಂದು ಪ್ರತಿಭಟನಾಕಾರರು ಹೇಳಿದರು.

‘ಶಾಸಕರು ಮನೆಯಲ್ಲಿರದ ವೇಳೆಯಲ್ಲೇ ಜೆಡಿಎಸ್ ಕಾರ್ಯಕರ್ತರು, ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ. ಶಾಸಕರ ತಂದೆ–ತಾಯಿಯನ್ನು ರಕ್ಷಿಸಲು ಬಂದ ಬಿಜೆಪಿ ಕಾರ್ಯಕರ್ತನ ಮೇಲೂ ಹಲ್ಲೆ ಮಾಡಿ ಗೂಂಡಾಗಳ ರೀತಿಯಲ್ಲಿ ವರ್ತಿಸಿದ್ದಾರೆ. ಇಂಥ ಗೂಂಡಾ ಪ್ರವೃತ್ತಿಗೆ ನಾವು ಹೆದರುವುದಿಲ್ಲ’ ಎಂದು ಗುಡುಗಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸದಾಶಿವ, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ನವೀನ್ ರೆಡ್ಡಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT