ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಹುಲ್‌ ಗಾಂಧಿ ಜನರ ಕ್ಷಮೆಯಾಚಿಸಲಿ’

ರಫೆಲ್‌ ಒಪ್ಪಂದ ಕುರಿತು ಸುಳ್ಳು ಮಾಹಿತಿ ಹಬ್ಬಿಸುತ್ತಿರುವ ಕಾಂಗ್ರೆಸ್‌: ಬಿಜೆಪಿ ಸದಸ್ಯರ ಆರೋಪ
Last Updated 16 ನವೆಂಬರ್ 2019, 12:49 IST
ಅಕ್ಷರ ಗಾತ್ರ

ಮಡಿಕೇರಿ: ಕೇಂದ್ರ ಸರ್ಕಾರದ ರಫೆಲ್‌ ಒಪ್ಪಂದ ಕುರಿತು ಸುಳ್ಳು ಮಾಹಿತಿ ಹಬ್ಬಿಸುತ್ತಿರುವ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ಘಟಕ ಪದಾಧಿಕಾರಿಗಳು ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.

ರಫೆಲ್‌ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದರೆ, ರಾಹುಲ್ ಗಾಂಧಿ ದೇಶದ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವುದು ಖಂಡನೀಯ ಎಂದು ಪ್ರತಿಭಟಷನಾಕಾರರುಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್‌ ಸದಸ್ಯ ಸುನೀಲ್‌ ಸುಬ್ರಮಣಿ ಮಾತನಾಡಿ, ರಫೆಲ್ ಖರೀದಿ ವಿಷಯದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಅಕ್ರಮ ನಡೆದಿಲ್ಲ. ಆದರೆ, ರಫೆಲ್ ಕುರಿತು ರಾಹುಲ್ ಗಾಂಧಿ ನೀಡುತ್ತಿರುವ ಹೇಳಿಕೆ ನಿಜಕ್ಕೂ ಸರಿಯಲ್ಲ. ಇದನ್ನೇ ನಂಬಿರುವ ಕಾಂಗ್ರೆಸ್ ಮುಖಂಡರು ಜನರಿಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದರು.

ದೇಶದ ರಕ್ಷಣಾ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಕೇಂದ್ರ ಸರ್ಕಾರದಿಂದ ನಡೆದಿಲ್ಲ. ವಿರೋಧಿ ಹೇಳಿಕೆ ನೀಡುವವರಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ದೇಶದ ಸೈನ್ಯದ ಬಲವರ್ಧನೆಗೆಅತ್ಯಾಧುನಿಕ ಯುದ್ಧ ಸಾಮಗ್ರಿಖರೀದಿಗೆ ಒಪ್ಪಂದ ಮಾಡಿಕೊಳ್ಳಬೇಕಿದೆ. ಇದರ ಸರಿಯಾದ ಮಾಹಿತಿಯನ್ನು ಕಂಡುಕೊಳ್ಳುವ ಗೋಜಿಗೆ ಹೋಗದ ರಾಹುಲ್ ಗಾಂಧಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ದೇಶದ ಭದ್ರತೆಗೆ ಹೆಚ್ಚಿನ ಯುದ್ಧವಿಮಾನಗಳನ್ನು ಪ್ರಧಾನಿ ನರೇಂದ್ರ ಮೋದಿ ಪಡೆಯಲು ಇಚ್ಛಿಸಿದ್ದಾರೆ. ಇದಕ್ಕೆ ಪಕ್ಷ ಬೇಧಮರೆತು ಎಲ್ಲರೂ ಒಂದಾಗಬೇಕು ಎಂದು ಕೋರಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಮಹೇಶ್ ಜೈನಿ, ಟಿ.ಎಸ್.ಪ್ರಕಾಶ್, ಸತೀಶ್‌, ಅನಿತಾ ಪೂವಯ್ಯ, ಉನ್ನೀಕೃಷ್ಣ, ಕೆ.ಎಸ್‌. ರಮೇಶ್, ಜಗದೀಶ್, ಪೂಣಚ್ಚ ಹಾಗೂ ಕಾರ್ಯಕರ್ತರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT