ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಬಿಜೆಪಿ

7

ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಬಿಜೆಪಿ

Published:
Updated:

ಬೆಂಗಳೂರು: ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಕಾಂಗ್ರೆಸ್‌ ಶಾಸಕರ ಜಗಳ ಪ್ರಕರಣವನ್ನು ಅಸ್ತ್ರವನ್ನಾಗಿ ಬಳಸಿಕೊಂಡಿರುವ ಬಿಜೆಪಿ, ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದಿದೆ.

'ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಎಲ್ಲರಿಗೂ ಸಂವಿಧಾನದ ಮೌಲ್ಯಗಳನ್ನು ಬೋಧಿಸುತ್ತಾರೆ. ಆನಂದ್‌ ಸಿಂಗ್‌ ಮೇಲೆ ಹಲ್ಲೆ ಮಾಡಿರುವ ಶಾಸಕರನ್ನು ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕೂಡಲೇ ಅಮಾನತು ಮಾಡಬೇಕು ಹಾಗೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು’ ಎಂದು ಬಿಜೆಪಿ ಕರ್ನಾಟಕ ಸರಣಿ ಟ್ವೀಟ್‌ಗಳನ್ನು ಮಾಡಿದೆ. ‘ದಿನೇಶ್‌ ಗುಂಡೂರಾವ್‌ ಅವರು ಈಗ ಬಿಜೆಪಿ ಮೇಲೆ ಆರೋಪ ಮಾಡುವಂತಿಲ್ಲ. ಅವರ ಕಣ್ಗಾವಲಿನಲ್ಲೇ ನಾಲ್ಕು ಗೋಡೆಗಳ ನಡುವೆ ಈ ಘಟನೆ ನಡೆದಿದೆ. ಈಗೇನಂತೀರಿ ದಿನೇಶ್‌ ಅವರೇ’ ಎಂದೂ ಪ್ರಶ್ನಿಸಿದೆ.

’ಕಾಂಗ್ರೆಸ್‌ ಶಾಸಕರು ಮದ್ಯಪಾನ ಮಾಡಿ ಹೊಡೆದಾಡಿಕೊಂಡಿದ್ದಾರೆ. ಆನಂದ್‌ ಸಿಂಗ್‌ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಉತ್ತರ ನೀಡಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದರು.

‘ಈ ಪ್ರಕರಣದಿಂದ ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿ ಜಗಜ್ಜಾಹೀರು ಆಗಿದೆ’ ಎಂದು ಆರ್‌. ಅಶೋಕ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !