ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರಿಗೆ ಹಣಕ್ಕಾಗಿ ಬ್ಲ್ಯಾಕ್‌ಮೇಲ್: ನ್ಯಾಯಾಂಗ ಬಂಧನಕ್ಕೆ ಪತ್ರಕರ್ತ ಹೇಮಂತ್

Last Updated 23 ಮಾರ್ಚ್ 2019, 3:01 IST
ಅಕ್ಷರ ಗಾತ್ರ

ಬೆಂಗಳೂರು: ವೈದ್ಯರಿಗೆ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಡಿ ಬಂಧಿತನಾಗಿರುವ ಪತ್ರಕರ್ತ ಹೇಮಂತ್ ಕಶ್ಯಪ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 7ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶಿಸಿತು.

‘ನಿಮಗೆ ಸಂಬಂಧಿಸಿದ ಅಶ್ಲೀಲ ವಿಡಿಯೊ ನನ್ನ ಬಳಿ ಇದೆ. ₹ 50 ಲಕ್ಷ ಕೊಡದಿದ್ದರೆ ಅದನ್ನು ವಾಹಿನಿಯಲ್ಲಿ ಪ್ರಸಾರ ಮಾಡುತ್ತೇನೆ’ ಎಂದು ಹೇಮಂತ್ ಬೆದರಿಸಿದ್ದಾಗಿ ವೈದ್ಯ ರಮಣ್‌ ರಾವ್ ಸದಾಶಿವನಗರ ಠಾಣೆಗೆ ದೂರು ಕೊಟ್ಟಿದ್ದರು. ಅದರನ್ವಯ ಆತನನ್ನು ಬಂಧಿಸಿದ್ದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದರು.

‘ನಾನು ಹಣಕ್ಕಾಗಿ ಬೇಡಿಕೆ ಇಟ್ಟಿದ್ದು ನಿಜ. ಆದರೆ, ಅವರು ಯಾವುದೇ ಹಣ ಕೊಟ್ಟಿರಲಿಲ್ಲ’ ಎಂದು ಹೇಮಂತ್ ಹೇಳಿಕೆ ಕೊಟ್ಟಿದ್ದಾನೆ. ಸಮಯ ವಾಹಿನಿಯ ವರದಿಗಾರ ಮಂಜುನಾಥ್, ಕ್ಯಾಮೆರಾ ಮನ್ ಮುರಳಿ ಬಂಧನಕ್ಕೆ ಶೋಧ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT