ಬಿಎಂಟಿಸಿ ಪರೀಕ್ಷೆ: ಬಂಧಿತ ಆರೋಪಿ ಟಾಪರ್‌

7
ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

ಬಿಎಂಟಿಸಿ ಪರೀಕ್ಷೆ: ಬಂಧಿತ ಆರೋಪಿ ಟಾಪರ್‌

Published:
Updated:

ಬೆಂಗಳೂರು: ಪೊಲೀಸ್ ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಡಿ ಬಂಧಿಸಲಾಗಿರುವ ಸೋಮಪ್ಪ ಮೇಲಿನಮನಿ (34) ಎಂಬಾತ, ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ನಡೆಸಿದ್ದ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ.

ವಿಜಯಪುರ ಜಿಲ್ಲೆಯ ಸೋಮಪ್ಪ, ನಾಲ್ಕು ತಿಂಗಳಿಂದ ಜಿಗಣಿ ಡಿಪೊದಲ್ಲಿ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಇತ್ತೀಚೆಗಷ್ಟೇ ಆತನನ್ನು ಬಂಧಿಸಿದ್ದರು.  

‘ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜ. 7ರವರೆಗೆ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಜೊತೆಗೆ ಬಿಎಂಟಿಸಿ ಪರೀಕ್ಷೆಯ ಫಲಿತಾಂಶ ಪಟ್ಟಿಯನ್ನು ಪರಿಶೀಲಿಸಲಾಗಿದ್ದು, ಅದರಲ್ಲಿ ಸೋಮಪ್ಪನ ಹೆಸರು ಮೊದಲ ಸ್ಥಾನದಲ್ಲಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !