ಮಂಗಳವಾರ, ಡಿಸೆಂಬರ್ 10, 2019
26 °C

ದೇಶದಲ್ಲಿ ಉದ್ಯೋಗ ಅವಕಾಶಕ್ಕೆ ಹೆಚ್ಚಿನ ಒತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಹೊಸಕೋಟೆ: ದೇಶದಲ್ಲಿ ಉದ್ಯೋಗ ಅವಕಾಶ ಕಲ್ಪಿಸುವುದು ದೊಡ್ಡ ಸಮಸ್ಯೆಯಾಗಿದ್ದರೂ ಉದ್ಯೋಗ ಸೃಷ್ಟಿಯು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಲವಾರು ವಿದೇಶಿ ಕಂಪನಿಗಳು ದೇಶದಲ್ಲಿ ಬಂಡವಾಳ ಹೂಡುವಂತೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಎನ್.ಬಚ್ಚೇಗೌಡ ಹೇಳಿದರು.

ಪಟ್ಟಣದ ವಿವೇಕಾನಂದ ಶಾಲೆ ಆವರಣದಲ್ಲಿ ತಾಲ್ಲೂಕು ಘಟಕದ ಬಿಜೆಪಿ ಡಿ. 1ಮತ್ತು 2ರಂದು ಆಯೋಜಿಸಿರುವ ಕೌಶಲ ತರಬೇತಿ ಮತ್ತು ಉದ್ಯೋಗ ಮೇಳಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಸ್ವಯಂ ಉದ್ಯೋಗ ಕಲ್ಪಿಸುವಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಆರ್ಥಿಕ ಸೌಲಭ್ಯ ನೀಡುವುದು ಸೇರಿದಂತೆ ಹಲವಾರು ಯೋಜನೆಗಳನ್ನು ಸಹ ಜಾರಿಗೆ ತಂದಿದ್ದಾರೆ’ ಎಂದರು.

ಮುಖಂಡ ಶರತ್ ಕುಮಾರ್ ಗೌಡ ಮಾತನಾಡಿ, ‘ತಾಲ್ಲೂಕಿನ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವುದೇ ಕಾರ್ಯಕ್ರಮದ ಉದ್ದೇಶವಾಗಿದೆ. ಅವರಿಗೆ ನೆರವಾಗುವಲ್ಲಿ ಕೌಶಲ ತರಬೇತಿಯನ್ನೂ ನೀಡಲಾಗುತ್ತಿದೆ. ಸುಮಾರು 2 ಸಾವಿರ ಯುವಕರು ಹೆಸರು ನೋಂದಾಯಿಸಿದ್ದು 56 ಕಂಪನಿಗಳು ಮೇಳದಲ್ಲಿ ಭಾಗವಹಿಸುತ್ತಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ’ ಎಂದು ಅವರು ಹೇಳಿದರು. ವೃಕ್ಷಂ ಕಂಪನಿ ಸಿಇಓ ಸುರೇಶ್,ಮುಖಂಡ ಸಿ.ಮಂಜುನಾಥ್ ಮಾತನಾಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು