23ರಂದು ಯುವ ಬರಹಗಾರರ ಚೊಚ್ಚಲ ಕೃತಿಗಳ ಬಿಡುಗಡೆ

7

23ರಂದು ಯುವ ಬರಹಗಾರರ ಚೊಚ್ಚಲ ಕೃತಿಗಳ ಬಿಡುಗಡೆ

Published:
Updated:

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಇದೇ 23 ರಂದು ಬೆಳಿಗ್ಗೆ 11ಕ್ಕೆ ಯುವ ಬರಹಗಾರರ ಚೊಚ್ಚಲ ಕೃತಿಗಳ ಬಿಡುಗಡೆ-2017 ಮತ್ತು ಶಾಲಾ–ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ನಯನ ರಂಗಮಂದಿರದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಸಾಹಿತಿಗಳಾದ ಡಾ.ಸಿದ್ದಲಿಂಗಯ್ಯ ಮತ್ತು ವಿಕ್ರಮ ವಿಸಾಜಿ ಅವರು ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ. ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿ ಅಧ್ಯಕ್ಷತೆ ವಹಿಸಲಿದ್ದಾರೆ.

2017ರಲ್ಲಿ ಯುವ ಬರಹಗಾರರು ರಚಿಸಿದ 50 ಪುಸ್ತಕಗಳು ಅಂದು ಬಿಡುಗಡೆಯಾಗಲಿವೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !