ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲ ಅಭಿವೃದ್ಧಿ ಕೇಂದ್ರ ಆರಂಭ

Last Updated 27 ಮೇ 2019, 19:17 IST
ಅಕ್ಷರ ಗಾತ್ರ

ಬೆಂಗಳೂರು: ಭವಿಷ್ಯದ ‌ಕಾರ್ಮಿಕರಿಗೆ ತಾಂತ್ರಿಕ ಜ್ಞಾನ ಹೆಚ್ಚಿಸುವ ಉದ್ದೇಶದಿಂದ ಬಾಷ್ ಲಿಮಿಟೆಡ್ ನಗರದ ಡೇರಿ ವೃತ್ತದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ ಆರಂಭಿಸಿದೆ.

ಈ ಕೇಂದ್ರವನ್ನುಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮಹಾನಿರ್ದೇಶಕ (ಡಿಜಿಟಿ) ರಾಜೇಶ್ ಅಗರವಾಲ್‌ ಹಾಗೂ ಬಾಷ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಸೌಮಿತ್ರ ಭಟ್ಟಾಚಾರ್ಯ ಸೋಮವಾರ ಉದ್ಘಾಟಿಸಿದರು.

ರಾಜೇಶ್ ಅಗರವಾಲ್‌ ಮಾತನಾಡಿ, ‘ಸಂಸ್ಥೆಯ ಸಹಭಾಗಿತ್ವದಡಿ ದೇಶದ 1,396 ಐಟಿಐಗಳನ್ನು ಮೇಲ್ದರ್ಜೆಗೇರಿಸುವ ಅತಿದೊಡ್ಡ ಯೋಜನೆ ಇದಾಗಿದೆ. ರಾಜ್ಯದಲ್ಲಿ 28 ಐಟಿಐ ಸಂಸ್ಥೆಗಳನ್ನು ಗುರುತಿಸಲಾಗಿದೆ. ಇದಕ್ಕಾಗಿ ₹10 ಕೋಟಿ ಅನುದಾನ ಮೀಸಲಿಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT