ಶನಿವಾರ, ನವೆಂಬರ್ 16, 2019
24 °C

ಕಳಪೆ ಕಾಳುಮೆಣಸು ಆಮದು; ಆರೋಪ

Published:
Updated:

ಬೆಂಗಳೂರು: ‘ವಿಯೆಟ್ನಾಂನಿಂದ ಕಳಪೆ ಗುಣಮಟ್ಟದ ಕಾಳುಮೆಣಸು ಆಮದು ಮಾಡಿ ₹5000 ಕೋಟಿ ಹವಾಲಾ ದಂಧೆ ನಡೆಸುತ್ತಿದ್ದಾರೆ. ಈ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರೂ ತನಿಖೆ ನಡೆಸದೇ, ಕೇವಲ ₹ 8 ಕೋಟಿ ಪ್ರಕರಣದಲ್ಲಿ ಶಾಸಕ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿದ್ದಾರೆ’ ಎಂದು ಕಾಂಗ್ರೆಸ್‌ ವಕ್ತಾರ ಬ್ರಿಜೇಶ್‌ ಕಾಳಪ್ಪ ಶುಕ್ರವಾರ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು, ‘ಸಗಟು ವ್ಯಾಪಾರದಲ್ಲಿ ನಕಲಿ ಬಿಲ್‌ ಸೃಷ್ಟಿಸಿ ಕಾಳುಮೆಣಸನ್ನು ತಂದು ದೇಶದಲ್ಲಿ ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದೆ. ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ಇದರಿಂದ ಅನ್ಯಾಯವಾಗುತ್ತಿದೆ’ ಎಂದು ವಿಷಾದಿಸಿದರು.

ಈ ಬಗ್ಗೆ ಹಲವು ಬಾರಿ ದೂರು ನೀಡಿದ್ದರೂ, ಕ್ರಮ ಕೈಗೊಂಡಿಲ್ಲ. ಇಡಿ ಇಲಾಖೆ ಜನರ ಕ್ಷೇಮಕ್ಕಾಗಿ ಇದೆಯೋ? ಅಥವಾ ರಾಜಕೀಯ ಪ್ರೇರಿತವಾಗಿ ಇದೆಯೋ ತಿಳಿಯುತ್ತಿಲ್ಲ ಎಂದರು.

ಒಕ್ಕೂಟದ ಸದಸ್ಯರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಪ್ರತಿಕ್ರಿಯಿಸಿ (+)