ಬಿ.ಎಸ್.ಯಡಿಯೂರಪ್ಪ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ಶನಿವಾರ, ಏಪ್ರಿಲ್ 20, 2019
31 °C

ಬಿ.ಎಸ್.ಯಡಿಯೂರಪ್ಪ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

Published:
Updated:

ಬೆಂಗಳೂರು: ದೇವರ ಬೀಸನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ವಶಪಡಿಸಿಕೊಂಡಿದ್ದ ಜಮೀನನ್ನು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆದ ಬಿ.ಎಸ್‌.ಯಡಿಯೂರಪ್ಪ ವಿರುದ್ಧದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಪ್ರಕರಣದ ಅಂತಿಮ ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ನಿಗದಿಪಡಿಸಲಾಗಿದೆ.

ಪ್ರಕರಣವೇನು?: ಬಿ.ಎಸ್‌.ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದ ವೇಳೆ ಕೆಐಎಡಿಬಿ, ವರ್ತೂರು ಹೋಬಳಿಯ ದೇವರಬೀಸನಹಳ್ಳಿ ಪ್ರದೇಶದ ವಿವಿಧ ಸರ್ವೇ ನಂಬರ್‌ಗಳಲ್ಲಿ ಜಮೀನು ಸ್ವಾಧೀನಪಡಿಸಿಕೊಂಡಿತ್ತು.

‘ಕೆಐಎಡಿಬಿ ವಶಪಡಿಸಿಕೊಂಡ ಪ್ರದೇಶದಲ್ಲಿ ಕೆಲವು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ’ ಎಂದು ಆರೋಪಿಸಿ ವಾಸುದೇವ ರೆಡ್ಡಿ 2013ರ ಜುಲೈ 10ರಂದು ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಅಂದಿನ ಕೈಗಾರಿಕಾ ಸಚಿವರಾಗಿದ್ದ ಆರ್‌.ವಿ.ದೇಶಪಾಂಡೆ ಈ ಪ್ರಕರಣದ ಮೊದಲನೇ ಆರೋಪಿ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !