ಶುಕ್ರವಾರ, ಅಕ್ಟೋಬರ್ 18, 2019
27 °C

ಬಿಎಸ್‌ಎನ್‌ಎಲ್‌ ಕೇಂದ್ರಗಳಲ್ಲಿ ಆಧಾರ್ ನೋಂದಣಿ

Published:
Updated:

ಬೆಂಗಳೂರು: ಆಧಾರ್ ನೋಂದಣಿ ಪ್ರಾಧಿಕಾರವು ಬಿಎಸ್‌ಎನ್‌ಎಲ್‌ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಆಧಾರ್ ನೋಂದಣಿ ಹಾಗೂ ನವೀಕರಣ ಸೌಲಭ್ಯ ಒದಗಿಸುವ ‌ಸೇವಾ ಕೇಂದ್ರಗಳನ್ನು ಆರಂಭಿಸಲು ಮಾನ್ಯತೆ ನೀಡಿದೆ. 

‘ರಾಜ್ಯದ ಎಲ್ಲ ಬಿಎಸ್‌ಎನ್‌ಎಲ್ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಆಧಾರ್ ನೋಂದಣಿ ಮತ್ತು ನವೀಕರಣದ ಸೌಲಭ್ಯಗಳು ದೊರೆಯಲಿವೆ. ಈಗಾಗಲೇ 100 ಆಧಾರ್ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಆಧಾರ್ ನೋಂದಣಿ ಸೇವೆ ಉಚಿತವಾಗಿ ದೊರೆಯಲಿದೆ. ಈ ಸೇವೆಯನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಬಿಎಸ್‌ಎನ್‌ಎಲ್‌ ಕರ್ನಾಟಕ ದೂರಸಂಪರ್ಕ ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮನವಿ ಮಾಡಿದ್ದಾರೆ.

Post Comments (+)