ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌–ಕಾರು ಡಿಕ್ಕಿ: ಮಹಿಳೆ ಸಾವು

Last Updated 13 ಜನವರಿ 2019, 20:15 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ರಾಷ್ಟ್ರೀಯ ಹೆದ್ದಾರಿ 4ರ ಹೊಸನಿಜಗಲ್ ಗೇಟ್ ಬಳಿ ಶನಿವಾರ ತಡರಾತ್ರಿ ಕಾರು ಅಪಘಾತವಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಸೀಮಾ ಅಲಿಯಾಸ್ ಸವಿತಾ (40) ಮೃತ ಮಹಿಳೆ. ಇವರ ಜೊತೆ ಪ್ರಯಾಣಿಸುತ್ತಿದ್ದ ಫೈರೋಜ್, ಮುಸಾ, ಜೂಹಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಚಾಲಕ ಅಪಘಾತದ ನಂತರ ನಾಪತ್ತೆಯಾಗಿದ್ದಾನೆ.

ವೇಗವಾಗಿ ಬಂದ ವೊಲ್ವೋ ಬಸ್ ಕಾರಿನ ಹಿಂಭಾಗಕ್ಕೆ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದರು.
ಕಾರಿನಲಿದ್ದ ಪ್ರಯಾಣಿಕರು ಪಾನಮತ್ತರಾಗಿದ್ದ ಶಂಕೆ ವ್ಯಕ್ತವಾಗಿದೆ.

ಅಪಘಾತವಾದ ಕಾರು ಹಲವು ಗಂಟೆಗಳ ಕಾಲ ಹೆದ್ದಾರಿ ಮಧ್ಯದ ಭಾಗದಲ್ಲಿ ಉಳಿದು ಸಂಚಾರಕ್ಕೆ ತೊಡಕಾಗಿತ್ತು. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT