ಸೋಮವಾರ, ಜೂಲೈ 13, 2020
22 °C

‘ಪಿಪಿಇ ಕಿಟ್ ಖರೀದಿ ಪಾರದರ್ಶಕ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಆರೋಗ್ಯ ಇಲಾಖೆ ಖರೀದಿ ಮಾಡಿರುವ ಪಿಪಿಇ ಕಿಟ್‌ಗಳಲ್ಲಿ ಯಾವುದೇ ನಕಲಿ ಅಥವಾ ಕಳಪೆ ಗುಣಮಟ್ಟ ಕಂಡು ಬಂದಿಲ್ಲ. ಅಂತೆಯೇ ಖರೀದಿಯೂ ಪಾರದರ್ಶಕವಾಗಿದೆ’ ಎಂದು ಆರೋಗ್ಯ ಇಲಾಖೆ ಹೈಕೋರ್ಟ್‌ಗೆ ತಿಳಿಸಿದೆ.

ಪಿಪಿಇ ಕಿಟ್‌ಗಳ ಕೊರತೆ ಹಾಗೂ ಗುಣಮಟ್ಟದ ವಿಚಾರಕ್ಕೆ ಸಂಬಂಧಿಸಿದಂತೆ ಡಾ.ರಾಜೀವ್ ಗೋಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಆರೋಗ್ಯ ಇಲಾಖೆ ಪರ ವಕೀಲರು ನ್ಯಾಯಪೀಠಕ್ಕೆ ಲಿಖಿತ ಹೇಳಿಕೆ ಸಲ್ಲಿಸಿದರು. ವಿಚಾರಣೆ ಮುಂದೂಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.