ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಕ್ಷಮೆಗೆ ಕಾಂಗ್ರೆಸ್‌ ಪಟ್ಟು

ಮನಮೋಹನ್‌ ಸಿಂಗ್‌ ವಿರುದ್ಧ ನಿರಾಧಾರ ಆರೋಪ
Last Updated 9 ಜೂನ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಗುಜರಾತ್‌ ಚುನಾವಣೆ ಫಲಿತಾಂಶದ ಮೇಲೆ ಪ್ರಭಾವ ಬೀರಲು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮತ್ತು ಕಾಂಗ್ರೆಸ್‌ನ ನಾಯಕರು ಪಾಕಿಸ್ತಾನದ ಜತೆ ಕೈಜೋಡಿಸಿದ್ದಾರೆಂದು ಸುಳ್ಳು ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಮಾಹಿತಿ ಹಕ್ಕು ಕಾಯ್ದೆ ಅಡಿ ಕೇಳಿದ್ದ ಮಾಹಿತಿಗೆ ಪ್ರಧಾನಿ ಕಚೇರಿ ನೀಡಿರುವ ಉತ್ತರ ಪ್ರಸ್ತಾಪಿಸಿರುವ ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ, ‘ಮೋದಿಯವರು ಪ್ರಧಾನಿಯಾದಾಗಿನಿಂದಲೂ ಅನಧಿಕೃತ ಮಾತುಗಳನ್ನೇ ಆಡುತ್ತಿದ್ದಾರೆ. ಆದರೆ, ಈಗ ಅವರನ್ನು ಅತ್ಯಂತ ಪ್ರಭಾವಿ ಪ್ರಧಾನಿಯೆಂದು ಪರಿಗಣಿಸಲಾಗುತ್ತಿದೆ’ ಎಂದು ವ್ಯಂಗ್ಯವಾಡಿದ್ದಾರೆ.

‘ಅವರೊಬ್ಬ ಚುನಾಯಿತ ನಾಯಕ ಮತ್ತು ಸಂವಿಧಾನಿಕ ಹುದ್ದೆಯಲ್ಲಿರುವವರು. ಸಂವಿಧಾನದ ಅಡಿ ಪ್ರಮಾಣ ಸ್ವೀಕರಿಸಿದ ಮೇಲೆ ಹೇಗೆ ಅನಧಿಕೃತ ಮಾಹಿತಿ ಆಧರಿಸಿ ಇಂತಹ ಹೇಳಿಕೆ ನೀಡಬಹುದು’ ಎಂದು ಖೇರಾ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT