ಸ್ವಚ್ಛತೆ ಕುರಿತ ಜಾಗೃತಿ ಮೂಡಿಸುವ ಕಾರ್ಯಕ್ರಮ

7

ಸ್ವಚ್ಛತೆ ಕುರಿತ ಜಾಗೃತಿ ಮೂಡಿಸುವ ಕಾರ್ಯಕ್ರಮ

Published:
Updated:
ಧಾರವಾಡದ ಅಕ್ಕಿಪೇಟೆಯಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಾರ್ವಜನಿಕರ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. 

ಧಾರವಾಡ: ಪತ್ರಿಕೋದ್ಯಮ ವಿದ್ಯಾರ್ಥಿಗಳು ಬುಧವಾರ ಸಾರ್ವಜನಿಕರ ಸಹಯೋಗದೊಂದಿಗೆ ಇಲ್ಲಿನ ಅಕ್ಕಿಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿದ್ದರು.  

ಪತ್ರಿಕೋದ್ಯಮ ವಿದ್ಯಾರ್ಥಿಗಳಾದ  ನಾಗರಾಜ ಬೂದನವರ, ಬಸಯ್ಯಾ ಹೀರೆಮಠ, ಮಂಜುನಾಥ ಕವಳಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಹಲವು ರಸ್ತೆಗಳನ್ನು ಸ್ವಚ್ಛಗೊಳಿಸಿದರು. ಜತೆಗೆ ಪ್ಲಾಸ್ಟಿಕ್‌ ಸೇರಿದಂತೆ ವಿವಿಧ ತ್ಯಾಜ್ಯ ವಸ್ತುಗಳನ್ನು ಕಸದ ಡಬ್ಬಿಯಲ್ಲೇ ಹಾಕುವಂತೆ ವ್ಯಾಪಾರಸ್ಥರಲ್ಲಿ ಮನವಿ ಮಾಡಿದರು. 

‘ನಮ್ಮ ಸುತ್ತಲಿನ ಪರಿಸರಕ್ಕೆ ಹಾನಿಯಾಗದಂತೆ ಅದನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ನಗರದ ಮುಖ್ಯ ಮಾರುಕಟ್ಟೆ ಪ್ರದೇಶವಾಗಿರುವ ಅಕ್ಕಿಪೇಟೆಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ಪ್ರತಿಯೊಬ್ಬರೂ ಸಹಯೋಗ ನೀಡಬೇಕು ಎಂದು ವಿನಂತಿಸಿದರು. 

ಸುರೇಂದ್ರ ಮಗೆಣ್ಣವರ, ಈರಣ್ಣ ಗಾಳಿ, ಭರತ್, ಶೇಕಪ್ಪಾ ತಿರ್ಲಾಪೂರ ಹಾಗೂ ವರ್ತಕರು, ಹಮಾಲರು ಇದ್ದರು. 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !