ಆನೇಕಲ್‌ನಲ್ಲಿ ಕಾರು ಡಿಕ್ಕಿ: ವ್ಯಕ್ತಿ ಸಾವು, ಶವವಿಟ್ಟು ಪ್ರತಿಭಟನೆ

ಗುರುವಾರ , ಜೂನ್ 20, 2019
26 °C

ಆನೇಕಲ್‌ನಲ್ಲಿ ಕಾರು ಡಿಕ್ಕಿ: ವ್ಯಕ್ತಿ ಸಾವು, ಶವವಿಟ್ಟು ಪ್ರತಿಭಟನೆ

Published:
Updated:

ಆನೇಕಲ್: ಅಲಯನ್ಸ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿಗೆ ಸೇರಿದ ಕಾರೊಂದು ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದರಿಂದ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಕುಟುಂಬದವರು ಅಲಯನ್ಸ್‌ ವಿವಿ ಮುಂದೆ ಶವವಿಟ್ಟು ಪ್ರತಿಭಟನೆ ಮಾಡಿದರು.

ತಾಲ್ಲೂಕಿನ ಆವಡದೇನಹಳ್ಳಿಯ ಮುನಿರಾಜು (26), ಬಸ್ ನಿಲ್ದಾಣದ ಬಳಿ ನಿಂತಿದ್ದಾಗ ಬಂದ ಅಲಯನ್ಸ್‌ ವಿವಿ ವಿದ್ಯಾರ್ಥಿಯ ಕಾರೊಂದು ಡಿಕ್ಕಿ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮುನಿರಾಜು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಬುಧವಾರ ಮೃತಪಟ್ಟರು. ಸ್ಥಳೀಯರು ಹಾಗೂ ಕುಟುಂಬದವರು ಶವದೊಂದಿಗೆ ಪ್ರತಿಭಟನೆ ನಡೆಸಿದರು.

ಈ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬೇಜವಾಬ್ದಾರಿಯಿಂದ ಈ ಭಾಗದಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಿಸಿದವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಆಡಳಿತ ಮಂಡಳಿಯವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಶವ ತೆರವುಗೊಳಿಸಲಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !