ಕುಣಿದು ಕುಪ್ಪಳಿಸಿ ಕಾಂಗ್ರೆಸ್ ವಿಜಯೋತ್ಸವ

ಭಾನುವಾರ, ಜೂನ್ 16, 2019
28 °C

ಕುಣಿದು ಕುಪ್ಪಳಿಸಿ ಕಾಂಗ್ರೆಸ್ ವಿಜಯೋತ್ಸವ

Published:
Updated:
Prajavani

ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸುತ್ತಿದ್ದಂತೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ‍ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು. ‘ಕಾಂಗ್ರೆಸ್‌ಗೆ ಜೈ’ ಘೋಷಣೆಗಳು ಮುಗಿಲು ಮುಟ್ಟಿದವು. ಪರಸ್ಪರ ಸಿಹಿ ತಿನಿಸಿ ಶುಭಾಶಯ ವಿನಿಮಯ ಮಾಡಿಕೊಂಡರು.

ಮತ ಎಣಿಕೆ ಕೇಂದ್ರದ ಎದುರು ಬೆಳಿಗ್ಗೆಯೇ ಕಾರ್ಯಕರ್ತರು ತಂಡೋಪತಂಡವಾಗಿ ಆಗಮಿಸಿದರು. ಪ್ರತಿ ಸುತ್ತಿನ ಮತ ಎಣಿಕೆ ಮುಗಿದು ಪಕ್ಷದ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿರುವುದು ಗೊತ್ತಾದ ನಂತರ ಜೋರಾಗಿ ಕೂಗಿ, ನೃತ್ಯ ಮಾಡಿದರು. ಅಂತಿನ ನಾಲ್ಕೈದು ಸುತ್ತುಗಳು ಇರುವಾಗ, ಅಂತಿಮ ಫಲಿತಾಂಶ ಘೋಷಣೆ ಆಗುವ ಮೊದಲೇ ಕಾರ್ಯಕರ್ತರು ವಿಜಯೋತ್ಸವದಲ್ಲಿ ತೊಡಗಿದರು.

ಕಾಂಗ್ರೆಸ್ ಬಾವುಟ ಹಿಡಿದು ಘೋಷಣೆಗಳನ್ನು ಕೂಗಿದರು. ಹೆಗಲ ಮೇಲೆ ಕಾರ್ಯಕರ್ತರನ್ನು ಹೊತ್ತುಕೊಂಡು ಕುಣಿದು ಕುಪ್ಪಳಿಸಿದರು. ಶಿವಳ್ಳಿ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದ್ದರು. ಆದ್ದರಿಂದ ಜನರು ಅವರ ಪತ್ನಿಯನ್ನು ಬೆಂಬಲಿಸಿದ್ದಾರೆ. ಇನ್ನಷ್ಟು ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಕಾರ್ಯಕರ್ತರು ಹೇಳಿದರು.

ನಾವು ನಿರೀಕ್ಷಿಸಿದಷ್ಟು ಲೀಡ್ ಬಂದಿಲ್ಲ. ಆದರೆ ಜಯ ಗಳಿಸಿರುವುದು ಸಮಾಧಾನ ತಂದಿದೆ. ಪಕ್ಷವನ್ನು ಇನ್ನಷ್ಟು ಬಲಪಡಿಸುತ್ತೇವೆ ಎಂದು ಅವರು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !