ಭಾನುವಾರ, ಆಗಸ್ಟ್ 18, 2019
22 °C

ಸ್ಪಂದಿಸದ ಕೇಂದ್ರ ಸರ್ಕಾರ: ನಾಯಕರ ಅಸಮಾಧಾನ

Published:
Updated:

ಬೆಂಗಳೂರು: ಮಳೆ ಹಾಗೂ ನೆರೆಯಿಂದ ದೊಡ್ಡ ಮಟ್ಟದ ಅನಾಹುತ ಸಂಭವಿಸಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಜೆಡಿಎಸ್, ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ.

‘ಅತಿವೃಷ್ಟಿಗೆ ತುತ್ತಾದವರಿಗೆ ಎಲ್ಲ ಪಕ್ಷಗಳ ಮುಖಂಡರು ಸಾಧ್ಯವಾದಷ್ಟು ನೆರವು ನೀಡುತ್ತಿದ್ದೇವೆ. ಇದು ರಾಜಕೀಯ ಮಾಡುವ ಸಮಯ
ವಲ್ಲ’ ಎಂದೂ ಹೇಳುತ್ತಿದ್ದಾರೆ. ಆದರೆ ಈವರೆಗೂ ಕೇಂದ್ರದಿಂದ ಹಣ ಬಿಡುಗಡೆ ಆಗಿಲ್ಲ ಎಂದು ಆರೋಪಿಸಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಕಣ್ಣಾರೆ ವಸ್ತು ಸ್ಥಿತಿ ಕಂಡಿದ್ದಾರೆ. ಆದರೆ ಈವರೆಗೂ ಪರಿಹಾರ ಪ್ರಕಟಿಸಿಲ್ಲ. ಕೇಂದ್ರದಿಂದ ಭರವಸೆಯೂ ಸಿಕ್ಕಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸ್ಪಂದಿಸಲು ಮನವಿ: ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿ ಇದ್ದು, ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಶಾಸಕ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

Post Comments (+)