ಮಂಗಳವಾರ, ಸೆಪ್ಟೆಂಬರ್ 21, 2021
25 °C
ಪೀಣ್ಯ–ಯಲಹಂಕ ವ್ಯಾಪ್ತಿಯಲ್ಲಿ ಕೃತ್ಯ

ಎರಡು ಸರಗಳವು, ದರೋಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ಪೀಣ್ಯ ಹಾಗೂ ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು, ಮಹಿಳೆಯರಿಬ್ಬರ ಸರಗಳವು ಮಾಡಿದ್ದಾರೆ. ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ಚಿನ್ನಾಭರಣ ದೋಚಿದ್ದಾರೆ.

ಪೀಣ್ಯ ಬಳಿಯ ದೊಡ್ಡಬಿದರಕಲ್ಲಿನಲ್ಲಿ ಜ್ಯೂಸ್‌ ಅಂಗಡಿ ಇಟ್ಟುಕೊಂಡಿರುವ ಗಾಯತ್ರಿ ಎಂಬುವರು, ಸೋಮವಾರ ಬೆಳಿಗ್ಗೆ 5.30 ಗಂಟೆಗೆ ಅಂಗಡಿ ಮುಂದೆ ಕಸಗೂಡಿಸಿ ಸ್ವಚ್ಛಗೊಳಿಸುತ್ತಿದ್ದರು. ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು, ಅವರ 30 ಗ್ರಾಂ ಚಿನ್ನದ ಸರವನ್ನು ಕಿತ್ತೊಯ್ದಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಯಲಹಂಕ ಬಳಿಯ ಮಾರುತಿನಗರದಲ್ಲಿ ಬೆಳಿಗ್ಗೆ 5.20 ಗಂಟೆಗೆ ರತ್ನಮ್ಮ ಎಂಬುವರ 40 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತೊಯ್ಯಲಾಗಿದೆ.

ಚಾಕು ತೋರಿಸಿ ದರೋಡೆ: ಗಿರಿನಗರದ ಮುನೇಶ್ವರ ಬ್ಲಾಕ್‌ನ 17ನೇ ಮುಖ್ಯರಸ್ತೆಯಲ್ಲಿ ದುಷ್ಕರ್ಮಿಗಳು, ಪ್ರಜ್ವಲ್‌ಗೌಡ ಎಂಬುವರಿಗೆ ಚಾಕು ತೋರಿಸಿ ಚಿನ್ನದ ಸರ ಹಾಗೂ ಉಂಗುರ ಸುಲಿಗೆ ಮಾಡಿದ್ದಾರೆ.

ಸ್ಥಳೀಯ ನಿವಾಸಿಯಾದ ಪ್ರಜ್ವಲ್‌, ಭಾನುವಾರ ಬೆಳಿಗ್ಗೆ ಮನೆಯ ಕಸವನ್ನು ಸಮೀಪದ ತೊಟ್ಟಿಗೆ ಹಾಕಿ ವಾಪಸ್‌ ನಡೆದುಕೊಂಡು ಹೋಗುತ್ತಿದ್ದರು. ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ್ದರು. ಅವರ 16 ಗ್ರಾಂ ಚಿನ್ನದ ಸರ, ಕೈಯಲ್ಲಿದ್ದ ಬ್ರೇಸ್‌ಲೆಟ್‌ ಹಾಗೂ 5 ಗ್ರಾಂ ಚಿನ್ನದ ಉಂಗುರ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಗಿರಿನಗರ ಪೊಲೀಸರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು