ಬುಧವಾರ, ಸೆಪ್ಟೆಂಬರ್ 29, 2021
19 °C

ವೃದ್ಧೆ ಬೀಳಿಸಿ ಸರ ಕಿತ್ತುಕೊಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲಾಲ್‌ಬಾಗ್ ಸಮೀಪದ ಮಾವಳ್ಳಿಯಲ್ಲಿ ಕಿಡಿಗೇಡಿಯೊಬ್ಬ ಶಾಂತಮ್ಮ (75) ಎಂಬುವರಿಂದ 110 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದಾನೆ.

ಮಂಗಳವಾರ ಬೆಳಿಗ್ಗೆ 6.30ರ ಸುಮಾರಿಗೆ ಮನೆ ಬಳಿ ವಾಯುವಿಹಾರ ಮಾಡುತ್ತಿದ್ದರು. ಈ ವೇಳೆ ಅವರನ್ನೇ ಹಿಂಬಾಲಿಸಿ ಬಂದ ಆರೋಪಿ, ಸರಕ್ಕೆ ಕೈ ಹಾಕಿದ್ದು ಪ್ರತಿರೋಧ ತೋರಿದಾಗ ಕೆಳಗೆ ಬೀಳಿಸಿ ಸರ ಕಿತ್ತುಕೊಂಡಿದ್ದಾನೆ. ಈ ವೇಳೆ ಸ್ಥಳೀಯರೊಬ್ಬರು ಹಿಡಿಯಲು ಯತ್ನಿಸಿದರಾದರೂ, ಕೈಗೆ ಸಿಗದೆ ಓಡಿ ಹೋಗಿದ್ದಾನೆ.

ಸರಗಳ್ಳನ ಕೃತ್ಯದ ದೃಶ್ಯ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಶಾಂತಮ್ಮ ಕಲಾಸಿಪಾಳ್ಯ ಠಾಣೆಗೆ ದೂರು ಕೊಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು