ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯ ವಿವಾಹ: ಬಾಲಕಿ ರಕ್ಷಣೆ

Last Updated 6 ಮೇ 2019, 19:40 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾಗಿರುವ ವನಿತಾ ಸಹಾಯವಾಣಿ ಸಿಬ್ಬಂದಿ, ಬಾಲಕಿಯನ್ನು ರಕ್ಷಿಸಿದ್ದಾರೆ.

‘ತಾಯಿಯೇ ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದರು. ಅದಕ್ಕೆ ಬೇಕಾದ ಸಿದ್ಧತೆ ಸಹ ಮಾಡಿಕೊಳ್ಳುತ್ತಿದ್ದರು. ಆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ರಕ್ಷಿಸಲಾಯಿತು’ ಎಂದು ವನಿತಾ ಸಹಾಯವಾಣಿ ಸಿಬ್ಬಂದಿ ತಿಳಿಸಿದರು.

‘ಬಾಲಕಿಯ ತಂದೆಗೆ ಮೂರು ಮದುವೆ ಆಗಿದ್ದು, ಸದ್ಯ ಮೂರನೇ ಪತ್ನಿ ಜೊತೆ ವಾಸವಿದ್ದಾರೆ. ತಾಯಿಗೂ ಎರಡು ಮದುವೆಯಾಗಿದೆ. ಅವರು ಮಗಳ ಬಾಲ್ಯವಿವಾಹ ಮಾಡುತ್ತಿದ್ದ ಬಗ್ಗೆ ತಂದೆಯೇ ಮಾಹಿತಿ ನೀಡಿದ್ದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT