ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳ ಆರೋಗ್ಯ ರಕ್ಷಣೆಗೆ ಮುನ್ನೆಚ್ಚರಿಕೆ ಮದ್ದು’

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅತಿಸಾರ ನಿಯಂತ್ರಣ ಪಾಕ್ಷಿಕ
Last Updated 3 ಜೂನ್ 2019, 20:06 IST
ಅಕ್ಷರ ಗಾತ್ರ

ಬೆಂಗಳೂರು: ಬೇಸಿಗೆ ಮುಗಿದು ಮಳೆಗಾಲ ಆರಂಭವಾಗುವ ಸಂದರ್ಭದಲ್ಲಿ ಸಾಮಾನ್ಯವಾಗಿ ಹರಡುವ ಅತಿಸಾರ ಭೇದಿಯನ್ನು ತಡೆಗಟ್ಟಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಂಕ್‌ ಗುಳಿಗೆ ಮತ್ತು ಒಆರ್‌ಎಸ್‌ ವಿತರಣೆಯ ಪಾಕ್ಷಿಕ ಆರಂಭಿಸಿದೆ.

ಸೋಮವಾರ ಇಲ್ಲಿ ನಡೆದ ಅತಿಸಾರ ನಿಯಂತ್ರಣ ಪಾಕ್ಷಿಕವನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ‘ ಅತಿಸಾರಭೇದಿಯ ಸಮಸ್ಯೆಗೆ ಬಡವರ್ಗದ, ಗುಡ್ಡಗಾಡು ಪ್ರದೇಶದ ಮಕ್ಕಳು ಹೆಚ್ಚು ಬಲಿಯಾಗುತ್ತಿದ್ದಾರೆ. ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣದಲ್ಲಿ ಶೇ 10ರಷ್ಟು ಇದೇ ಕಾರಣದಿಂದ ಆಗುತ್ತಿದೆ. ಮಕ್ಕಳ ಆರೋಗ್ಯ ಕಾಪಾಡಲು ಮುನ್ನೆಚ್ಚರಿಕೆ ಯೇ ಮದ್ದು’ ಎಂದರು.

ಪಾಕ್ಷಿಕ ಅವಧಿಯಲ್ಲಿ ರಾಜ್ಯದಾದ್ಯಂತ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಒಆರ್‌ಎಸ್‌ ಮತ್ತು ಜಿಂಕ್‌ ಗುಳಿಗೆ ವಿತರಿಸಲಿದ್ದಾರೆ. ಪ್ರತಿ ಮನೆಗೆ ತೆರಳಿ ತಾಯಂದಿರಿಗೆ ಕೂಡ ಸ್ವಚ್ಛತೆ ಮತ್ತು ಅತಿಸಾರ ನಿಯಂತ್ರಣ ವಿಧಾನಗಳ ಮಾಹಿತಿ ನೀಡಲಿದ್ದಾರೆ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಜಿಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ ಹೊರರೋಗಿ ಮತ್ತು ಒಳಗರೋಗಿ ವಿಭಾಗಗಳಲ್ಲಿ ಒಆರ್‌ಎಸ್‌ ಮತ್ತು ಜಿಂಕ್‌ ಕೇಂದ್ರಗಳನ್ನು ತೆರೆಯಲಾಗು
ವುದು. ಅತಿ ಸೂಕ್ಷ್ಮ ಪ್ರದೇಶಗಳಿಗೆ ಸಂಚಾರಿ ತಂಡಗಳನ್ನು ಕಳುಹಿಸಿ ಮಾಹಿತಿ ನೀಡಲಾಗುವುದು ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT