ಚಿತ್ರಕಲಾ ಪರಿಷತ್‌ಗೆ ಆರ್ಥಿಕ ನಷ್ಟ ಆರೋಪ; ನಾಲ್ವರ ವಿರುದ್ಧ ಎಫ್‌ಐಆರ್‌

ಬುಧವಾರ, ಜೂನ್ 26, 2019
28 °C
₹ 60.62 ಲಕ್ಷ ದುರ್ಬಳಕೆ l

ಚಿತ್ರಕಲಾ ಪರಿಷತ್‌ಗೆ ಆರ್ಥಿಕ ನಷ್ಟ ಆರೋಪ; ನಾಲ್ವರ ವಿರುದ್ಧ ಎಫ್‌ಐಆರ್‌

Published:
Updated:

ಬೆಂಗಳೂರು: ರಾಜ್ಯ ಸರ್ಕಾರ ನೀಡಿದ್ದ ಅನುದಾನದಲ್ಲಿ ₹ 60.62 ಲಕ್ಷ ದುರ್ಬಳಕೆ ಮಾಡಿಕೊಂಡು ಚಿತ್ರಕಲಾ ಪರಿಷತ್‌ಗೆ ಆರ್ಥಿಕ ನಷ್ಟ ಉಂಟು ಮಾಡಿ ಸದಸ್ಯರನ್ನು ವಂಚಿಸಿದ ಆರೋಪದಡಿ ಪರಿಷತ್‌ನ ಹಿಂದಿನ ಅಧ್ಯಕ್ಷ ಸೇರಿದಂತೆ ನಾಲ್ವರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಶುಕ್ರವಾರ ಎಫ್‌ಐಆರ್‌ ದಾಖಲಾಗಿದೆ.

‘ಹಣ ದುರ್ಬಳಕೆ ಹಾಗೂ ವಂಚನೆ ಸಂಬಂಧ ಪರಿಷತ್‌ನ ಮಾಜಿ ನೌಕರ ಟಿ.ಎಂ.ವಿ. ಗೌಡ ದೂರು ನೀಡಿದ್ದಾರೆ. ಅಂದಿನ ಅಧ್ಯಕ್ಷರೂ ಆಗಿದ್ದ ಹಾಲಿ ಉಪಾಧ್ಯಕ್ಷ ಟಿ. ಪ್ರಭಾಕರ್, ‍ಪ್ರಧಾನ ಕಾರ್ಯದರ್ಶಿ ಎಂ.ಜಿ. ಕಮಲಾಕ್ಷಿ, ಉಪಾಧ್ಯಕ್ಷ ಹರೀಶ್ ಪದ್ಮನಾಭ ಹಾಗೂ ಸಹಾಯಕ ಕಾರ್ಯದರ್ಶಿ ಕೆ.ಎಸ್. ಅಪ್ಪಾಜಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

2007– 2009 ಆರ್ಥಿಕ ವರ್ಷದಲ್ಲಿ ಅನುದಾನ ದುರ್ಬಳಕೆ ಆಗಿರುವುದಾಗಿ ಆರೋಪಿಸಿ ಕೆಲವು ಸದಸ್ಯರು ಸಂಘಗಳ ಜಿಲ್ಲಾ ನೋಂದಣಾಧಿಕಾರಿ ಕಚೇರಿಗೆ ದೂರು ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ಜಿಲ್ಲಾ ನೋಂದಣಾಧಿಕಾರಿಗಳ ನ್ಯಾಯಾಲಯ, ದುರ್ಬಳಕೆ ಆಗಿರುವ ₹ 60.62 ಲಕ್ಷವನ್ನು ಆರೋಪಿಗಳಿಂದ ವಸೂಲಿ ಮಾಡುವಂತೆ ಆದೇಶ ಹೊರಡಿಸಿತ್ತು.

ಅದೇ ಆದೇಶವನ್ನು ಆಧರಿಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೂರುದಾರರು, ನಗರ ಪೊಲೀಸ್ ಕಮಿಷನರ್ ಕಚೇರಿಗೆ ದೂರು ನೀಡಿದ್ದರು’ ಎಂದು ಪೊಲೀಸರು ಹೇಳಿದರು.

ತೇಜೋವಧೆಗೆ ಯತ್ನ: ತಮ್ಮ ವಿರುದ್ಧದ ಆರೋಪದ ಕುರಿತು ಮಾತನಾಡಿದ ಟಿ.ಪ್ರಭಾಕರ್, ‘ಜಿಲ್ಲಾ ನೋಂದಣಾಧಿಕಾರಿಗಳ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ಅದರ ವಿಚಾರಣೆ ನಡೆಯುತ್ತಿದೆ. ಅದರ ನಡುವೆಯೇ ಈ ಪ್ರಕರಣ ದಾಖಲಾಗಿದ್ದು, ಇದರ ಹಿಂದೆ ಕೆಲವರ ಷಡ್ಯಂತ್ರವಿದೆ’ ಎಂದು ಆರೋಪಿಸಿದರು.

‘ನಗರ ಪೊಲೀಸ್ ಕಮಿಷನರ್‌ ಅವರಿಗೆ ತಪ್ಪು ಮಾಹಿತಿ ನೀಡಿ ದೂರು ದಾಖಲಾಗುವಂತೆ ಮಾಡಿ ನಮ್ಮ ಹಾಗೂ ಚಿತ್ರಕಲಾ ಪರಿಷತ್‌ನ ತೇಜೋವಧೆಗೆ ಯತ್ನಿಸಲಾಗಿದೆ’ ಎಂದೂ ಅವರು ದೂರಿದರು.  

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !