ಬುಧವಾರ, ಏಪ್ರಿಲ್ 21, 2021
25 °C

ನೀರು ಸರಬರಾಜು ಕಾಮಗಾರಿಗಳ ಮುಕ್ತಾಯಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರ ಜಿಲ್ಲೆಯಲ್ಲಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ನಿಗದಿತ ಅವಧಿಯೊಳಗೆ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ. ಮುನಿರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಕ್ರಿಯಾ ಯೋಜನೆ ರೂಪಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯೋಜನೆಯು ಯಶಸ್ವಿಯಾಗಲು ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಬೇಕು. ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು ಎಂದು ಸೂಚಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.