ಜಾಗೃತಿಗಾಗಿ ಒಂದು ಸಾವಿರ ಮತದಾರರ ಸಾಕ್ಷರ ಕ್ಲಬ್ ರಚನೆ

7

ಜಾಗೃತಿಗಾಗಿ ಒಂದು ಸಾವಿರ ಮತದಾರರ ಸಾಕ್ಷರ ಕ್ಲಬ್ ರಚನೆ

Published:
Updated:

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಒಳಗೊಂಡ ಒಂದು ಸಾವಿರ ಮತದಾರರ ಸಾಕ್ಷರತಾ ಕ್ಲಬ್‌ಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಎಮ್.ಎಸ್.ಅರ್ಚನಾ ತಿಳಿಸಿದರು.

ಬನಶಂಕರಿಯಲ್ಲಿರುವ ನಗರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆ-2019ರ ಪೂರ್ವಭಾವಿ ಸಿದ್ಧತೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರ ನೋಂದಣಿಗೆ ಅರಿವು ಮೂಡಿಸಬೇಕು. ಇದಕ್ಕಾಗಿ ಪಿಯು ಮತ್ತು ಪದವಿ ಕಾಲೇಜುಗಳಲ್ಲಿ ಮತದಾನದ ಜಾಗೃತಿ, ನೋಂದಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕರಿಗೆ ಸೂಚಿಸಿದರು. ಮತದಾರರ ಸಾಕ್ಷರತಾ ಕ್ಲಬ್‌ಗಳ ಮೂಲಕ ವಿದ್ಯಾರ್ಥಿಗಳಲ್ಲಿ ನೈತಿಕ ಮತದಾನ ಮತ್ತು ಅದರ ಮಹತ್ವದ ಕುರಿತು ಚರ್ಚಾ ಸ್ಪರ್ಧೆ, ಪ್ರಬಂಧ ಬರಹ, ರಸಪ್ರಶ್ನೆ ಸೇರಿದಂತೆ ಹಲವು ಸ್ಪರ್ಧೆ ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಜತೆಗೆ ಸಾಮಾಜಿಕ ಜಾಲತಾಣಗಳನ್ನೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !