ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂಆರ್‌ ವಿ.ವಿ: ಬಿ.ಟೆಕ್ ಕಾರ್ಯಕ್ರಮ ಉದ್ಘಾಟನೆ

Last Updated 15 ಆಗಸ್ಟ್ 2019, 19:54 IST
ಅಕ್ಷರ ಗಾತ್ರ

ಕೆ.ಆರ್.ಪುರ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಾಧನೆ ಮೆಟ್ಟಿಲು ಹತ್ತಲು ಶ್ರಮ ಮುಖ್ಯವಾಗುತ್ತದೆ ಎಂದು ಬೆಂಗಳೂರು ಐಐಎಂನ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ರವಿಕುಮಾರ್ ತಿಳಿಸಿದರು.

ಹೆಣ್ಣೂರು ಸಮೀಪದ ಚಗಲಟ್ಟಿಯ ಸಿಎಂಆರ್ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಿ.ಟೆಕ್ ವಿದ್ಯಾರ್ಥಿಗಳ ನೂತನ ತರಗತಿ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ನಾಲ್ಕು ವರ್ಷಗಳ ಎಂಜಿನಿಯರಿಂಗ್ ಕೋರ್ಸ್‌ ವಿದ್ಯಾರ್ಥಿಗಳ ಜೀವನದ ದಿಕ್ಕನ್ನು ಬದಲಿಸಬಹುದು. ಯಾವುದೇ ವಿಷಯವಾಗಿರಲಿ ನಾವು ಮಾಡುವ ಕೆಲಸದಲ್ಲಿ ಪ್ರಾಧ್ಯಾಪಕರ ಸಲಹೆ ಸೂಚನೆಗಳು ಮುಖ್ಯವಾಗುತ್ತವೆ. ಹೊಸದನ್ನು ಶೋಧಿಸುವ ಕೆಲಸವನ್ನು ವಿದ್ಯಾರ್ಥಿಗಳ ಮಾಡಬೇಕು’ ಎಂದರು.

ಸಿಎಂಆರ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಎಸ್.ಶಿವಕುಮಾರ್, ‘ಎಂಜಿನಿಯರಿಂಗ್ ತರಗತಿಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಉತ್ತಮ ತಂತ್ರಜ್ಞಾನ ಹೊಂದಿದ ಪ್ರಯೋಗಾಲಯಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT