ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುತೂಹಲ ಕೆರಳಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Last Updated 16 ಸೆಪ್ಟೆಂಬರ್ 2019, 20:05 IST
ಅಕ್ಷರ ಗಾತ್ರ

ಬೆಂಗಳೂರು: ವಿರೋಧ ಪಕ್ಷದ ನಾಯಕನ ಆಯ್ಕೆಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ನಡೆದಿರುವ ಬೆನ್ನಿಗೆ ಶಾಸಕಾಂಗ ಪಕ್ಷದ ವಿಶೇಷ ಸಭೆಯನ್ನು ಕರೆದಿರುವುದು ಕುತೂಹಲ ಹುಟ್ಟುಹಾಕಿದೆ.

ಶಾಸಕಾಂಗ ಪಕ್ಷದ ವಿಶೇಷ ಸಭೆಯನ್ನು ಸೆ. 18ರಂದು ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕರೆದಿದ್ದಾರೆ. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ವಿಚಾರವೂ ಪ್ರಮುಖವಾಗಿ ಚರ್ಚೆ ಯಾಗಲಿದೆ ಎಂದು ಹೇಳಲಾಗುತ್ತಿದೆ.

ಸಂಖ್ಯಾ ಬಲದ ಆಧಾರದ ಮೇಲೆ ವಿಧಾನಸಭೆಯಲ್ಲಿ ಕಾಂಗ್ರೆಸ್ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸ ಲಿದ್ದು,ವಿರೋಧ ಪಕ್ಷದ ನಾಯಕನ ಆಯ್ಕೆ ನಡೆದಿಲ್ಲ. ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡಬೇಕೆ? ಇಲ್ಲವೆ ಪಕ್ಷದ ಇತರ ನಾಯಕರಿಗೆ ಅವಕಾಶ ಕಲ್ಪಿಸಬೇಕೆ? ಎಂಬ ಚರ್ಚೆಗಳು ನಡೆದಿವೆ.

ಈಚೆಗೆ ದೆಹಲಿಗೆ ಭೇಟಿ ನೀಡಿದ್ದ ಸಮಯದಲ್ಲಿ ಸಿದ್ದರಾಮಯ್ಯ ಅವರಿಗೆ ಈ ಸಂಬಂಧ ಯಾವುದೇ ಭರವಸೆಯೂ ಸಿಕ್ಕಿಲ್ಲ. ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲೂ ಸಾಧ್ಯವಾಗಿಲ್ಲ.

‘ತಮ್ಮ ಮೇಲೆ ಶಾಸಕರಿಗೆ ವಿಶ್ವಾಸ ಇದೆ ಎಂಬ ಸಂದೇಶ ರವಾನಿಸುವ ಸಲು ವಾಗಿ ಸಭೆ ಕರೆದಿದ್ದಾರೆ. ಆ ಮೂಲಕ ವಿರೋಧ ಪಕ್ಷದ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಪ್ರಯತ್ನ ನಡೆಸಿ ದ್ದಾರೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಚರ್ಚೆ ವಿಚಾರ:ಪ್ರವಾಹಪೀಡಿತ ಸ್ಥಳಗಳಲ್ಲಿ ಆಗಿರುವ ಹಾನಿ, ಸರ್ಕಾರ ಕೈಗೊಂಡಿರುವ ಪರಿಹಾರ; ಬರ ಪ್ರದೇಶ ಗಳಿಗೆ ನೆರವು; ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ಆಗು ತ್ತಿರುವ ತಾರತಮ್ಯ, ಅನುದಾನ ಕಡಿತದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT