ಕ್ರೈಸ್ತರಿಗೆ ಕಾಂಗ್ರೆಸ್‌ ಅನ್ಯಾಯ ಮಾಡಿಲ್ಲ: ಐವಾನ್

ಸೋಮವಾರ, ಏಪ್ರಿಲ್ 22, 2019
31 °C

ಕ್ರೈಸ್ತರಿಗೆ ಕಾಂಗ್ರೆಸ್‌ ಅನ್ಯಾಯ ಮಾಡಿಲ್ಲ: ಐವಾನ್

Published:
Updated:

ಬೆಂಗಳೂರು: ‘ಎಚ್‌.ಟಿ. ಸಾಂಗ್ಲಿಯಾನ ಅವರಿಗೆ ಟಿಕೆಟ್ ನಿರಾಕರಿಸುವ ಮೂಲಕ ಕ್ರೈಸ್ತ ಸಮುದಾಯಕ್ಕೆ ಕಾಂಗ್ರೆಸ್‌ ಅನ್ಯಾಯ ಮಾಡಿಲ್ಲ’ ಎಂದು ವಿಧಾನಪರಿಷತ್‌ ಸದಸ್ಯ ಐವಾನ್ ಡಿಸೋಜಾ ಸಮರ್ಥಿಸಿದರು.

ವಿವಿಧ ಅಲ್ಪಸಂಖ್ಯಾತ ಸಮುದಾಯಗಳ ಮುಖಂಡರ ಜೊತೆ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ರೈಸ್ತರೂ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜಕೀಯ ಶಕ್ತಿ ನೀಡಿರುವುದೇ ಕಾಂಗ್ರೆಸ್‌. ಮುಂದಿನ ದಿನಗಳಲ್ಲೂ ಪಕ್ಷ ಅವಕಾಶ ನೀಡುವ ನಿರೀಕ್ಷೆ ಇದೆ. ಈ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್‌ ಬೆನ್ನಿಗೆ ನಿಲ್ಲಲಿದ್ದಾರೆ’ ಎಂದರು.

ವಯನಾಡ್‌ನಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿದ್ದಾರೆ ಎಂಬ ಕಾರಣಕ್ಕೆ ರಾಹುಲ್ ಗಾಂಧಿ ಅಲ್ಲಿಂದ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ ಎಂದು ಪ್ರಧಾನಿ ಮೋದಿ ನೀಡಿದ ಹೇಳಿಕೆಗೆ, ‘ಶೇ 17ರಷ್ಟಿರುವ ಅಲ್ಪಸಂಖ್ಯಾತರು ಈ ದೇಶದ ಪ್ರಜೆಗಳಲ್ಲವೇ. ಅಲ್ಪಸಂಖ್ಯಾತರ ಮತಗಳು ಲೆಕ್ಕಕ್ಕೆ ಇಲ್ಲವೇ’ ಎಂದು ಪ್ರಶ್ನಿಸಿದರು.

‘ಈ ಹೇಳಿಕೆ ಮೋದಿಯವರ ದಿವಾಳಿತನ ತೋರಿಸುತ್ತದೆ. ದೇಶವನ್ನು ಧರ್ಮ ಮತ್ತು ಜಾತಿ ಆಧಾರದಲ್ಲಿ ಮೋದಿ ವಿಭಜಿಸುತಿದ್ದಾರೆ. ಅವರು ದೇಶದ ಜನರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಜನ ಮೋದಿಗೆ ಸರಿಯಾದ ಪಾಠ ಕಲಿಸಲಿದ್ದಾರೆ’ ಎಂದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !