ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

7
ಶಾಸಕ ಜಗದೀಶ ಶೆಟ್ಟರ್ ವಿಳಂಬ ಧೋರಣೆ ಆರೋಪ

ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Published:
Updated:
Deccan Herald

ಹುಬ್ಬಳ್ಳಿ: ಕೇಶ್ವಾಪುರದ ಶನಿವಾರ ಸಂತೆ ಮೈದಾನ, ಕೆಎಂಸಿ ಆವರಣ. ಉಣಕಲ್ ಹಾಗೂ ಗೋಕುಲ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಬಿಜೆಪಿ ಮುಖಂಡರು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಬಡವರಿಗೆ ಕಡಿಮೆ ದರದಲ್ಲಿ ಊಟ ಹಾಗೂ ಉಪಹಾರ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೊಳಿಸಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದಲ್ಲಿ ಈಗಾಗಲೇ ಆರಂಭವಾಗಿರುವ ಮೂರು ಕ್ಯಾಂಟೀನ್ ಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಆದರೆ ನಾಲ್ಕು ತಿಂಗಳ ಹಿಂದೆಯೇ ಕಾಮಗಾರಿ ಪೂರ್ಣಗೊಂಡಿರುವ ಕೇಶ್ವಾಪುರದ ಕ್ಯಾಂಟೀನ್ ಉದ್ಘಾಟನೆಗೆ ಬಿಜೆಪಿ ಅಡ್ಡಪಡಿಸುತ್ತಿದೆ ಎಂದು ಆರೋಪಿಸಿದರು.

'ಸೆಂಟ್ರಲ್ ಕ್ಷೇತ್ರದಲ್ಲಿ ನಾಲ್ಕು ಕ್ಯಾಂಟೀನ್ ಇವೆ. ಅವುಗಳನ್ನು ಉದ್ಘಾಟನೆ ಮಾಡಲು ಶಾಸಕ ಜಗದೀಶ್ ಶೆಟ್ಟರ್ ಅಡ್ಡಿಪಡಿಸುತ್ತಿದ್ದಾರೆ. ಆರಂಭದಿಂದಲೂ ಇದಕ್ಕೆ ತೊಂದರೆ ನೀಡುತ್ತಿದ್ದಾರೆ. ಈಗಲಾದರೂ ಕ್ಯಾಂಟೀನ್ ಉದ್ಘಾಟನೆ ಮಾಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು' ಎಂದು ಉಣಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗನಿ ವಲಿ ಅಹಮ್ಮದ್ ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಮುಖಂಡರಾದ ಹೂವಪ್ಪ ದಾಯಗೋಡಿ, ಬಸವರಾಜ್, ಮಕ್ತುಮ್ ಜಾಲೇಗಾರ್, ಅರವಿಂದ ಮೆಹರವಾಡೆ, ಕಾಲೂಸಿಂಗ್, ಖಾಸೀಂ ಕೂಡಲಗಿ, ಮೆಹಬೂಬ್ ಬೇಪಾರಿ, ಪ್ರಕಾಶ ಜಾಧವ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !