ಶನಿವಾರ, ಮೇ 21, 2022
25 °C

ಮೋದಿ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ಖಂಡಿಸಿ ಪ್ರದೇಶ ಕಾಂಗ್ರೆಸ್‌ ಪ್ರಚಾರ ಸಮಿತಿ ಸದಸ್ಯರು ಆನಂದರಾವ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು.

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ರಾಜೀವ್‌ಗಾಂಧಿ ವಿರುದ್ಧ ಮೋದಿ ನೀಡಿರುವ ಹೇಳಿಕೆ ಸುಳ್ಳಿನಿಂದ ಕೂಡಿದೆ. ಅವರು ದೇಶಕ್ಕೆ ಮಾದರಿ. ರಾಜೀವ್‌ಗಾಂಧಿ ಬಗ್ಗೆ ಮಾತನಾಡಲು ಮೋದಿಗೆ ಯೋಗ್ಯತೆ ಇಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿ
ಸಿದರು.‌

ಮೋದಿಗೆ ಲೋಕಸಭ ಚುನಾವಣೆಯಲ್ಲಿ ಸೋಲುವ ಭೀತಿ ಎದುರಾಗಿದೆ. ಆದ್ದರಿಂದಲೇ ಈ ರೀತಿ ಮಾತನಾಡುತ್ತಿದ್ದಾರೆ. ರಫೇಲ್‌ ಹಗರಣದಲ್ಲಿ ಹಗಲು ದರೋಡೆ ನಡೆಸಿ, ಅಂಬಾನಿ ಕುಟುಂಬಕ್ಕೆ ಸಹಕಾರ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.