ಸೋಮವಾರ, ಜೂನ್ 1, 2020
27 °C
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7ನೇ ಕೋವಿಡ್‌–19 ಪ್ರಕರಣ ದೃಢ

ಮಂಗಳೂರು: 3,032 ಜನರಿಗೆ ಹೋಮ್‌ ಕ್ವಾರಂಟೈನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 10 ತಿಂಗಳ ಮಗುವಿಗೆ ಕೋವಿಡ್–19 ದೃಢಪಟ್ಟಿದ್ದು, ಇದುವರೆಗೆ ಜಿಲ್ಲೆಯಲ್ಲಿ 7 ಪ್ರಕರಣಗಳು ಖಚಿತವಾದಂತಾಗಿದೆ. ಉಳಿದಂತೆ ಪರೀಕ್ಷೆಗೆ ಕಳುಹಿಸಿದ್ದ ಇನ್ನೂ ನಾಲ್ಕು ಮಾದರಿಗಳಲ್ಲಿ ಸೋಂಕು ಇಲ್ಲದೇ ಇರುವುದು ದೃಢಪಟ್ಟಿದೆ.

ಶುಕ್ರವಾರ ಒಟ್ಟು 64 ಮಂದಿಯ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಒಟ್ಟು 3,032 ಜನರು ಹೋಮ್‌ ಕ್ವಾರಂಟೈನ್‌ ನಲ್ಲಿದ್ದಾರೆ. ನಗರದ ಇಎಸ್‌ಐ ಆಸ್ಪತ್ರೆಯಲ್ಲಿ 28 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 20 ಮಂದಿ ಹೋಮ್‌ ಕ್ವಾರಂಟೈನ್‌ನ 14 ದಿನಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ತಿಳಿಸಿದ್ದಾರೆ.

ಶುಕ್ರವಾರ ಮತ್ತೆ 15 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಹೊಸದಾಗಿ 6 ಶಂಕಿತ ಪ್ರಕರಣಗಳು ವರದಿಯಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ.

ಸಜಿಪನಡು ಗ್ರಾಮದ 10 ತಿಂಗಳ ಮಗುವಿಗೆ ಕೋವಿಡ್‌–19 ದೃಢಪಟ್ಟಿದ್ದು, ಮಗುವಿನ ತಾಯಿ ಹಾಗೂ ಅಜ್ಜಿಯನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ. ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಹಿರಿಯರು ಕಾಳಜಿ ವಹಿಸಿ: ಕೊರೊನಾ ವೈರಸ್‌ನಿಂದ ಹಿರಿಯ ನಾಗರಿಕರು ಹೆಚ್ಚು ಜಾಗೃತರಾಗಿರಬೇಕು. ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಹಿರಿಯರು ಸಾಧ್ಯವಾದಷ್ಟು ಮನೆಯಿಂದ ಹೊರಗೆ ಬರಬಾರದು. ಪೌಷ್ಟಿಕ ಆಹಾರ ಸೇವಿಸಬೇಕು. ಆಗಾಗ್ಗೆ ಕೈತೊಳೆಯಬೇಕು. ಜ್ವರ, ಕೆಮ್ಮು ಮುಂತಾದ ಲಕ್ಷಣಗಳು ಕಂಡುಬಂದಲ್ಲಿ, ನಿರ್ಲಕ್ಷಿಸದೇ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು