ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲಾ ಕಟ್ಟಡಕ್ಕೆ ಕಾರ್ಪೊರೇಟ್‌ ನೆರವು

ಹೆಗಡೆನಗರ: ₹3 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ
Last Updated 7 ಜೂನ್ 2019, 19:40 IST
ಅಕ್ಷರ ಗಾತ್ರ

ಯಲಹಂಕ: ಎ‌‌ಎನ್‌ಜಡ್‌ ಹಾಗೂ ಎಂಬೆಸಿ ಸಮೂಹ ಕಂಪನಿಗಳ ಸಹಯೋಗದಲ್ಲಿ ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ಹೆಗ್ಗಡೆನಗರದಲ್ಲಿ ₹3 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಲಾಯಿತು.

ಕಲರ್ಸ್ ಆಫ್ ಲೈಫ್ ಸಂಸ್ಥೆಯವರು ಶಾಲೆಯ ಜೊತೆಗೆ ಒಪ್ಪಂದ ಮಾಡಿಕೊಂಡು, ಒಟ್ಟು 800 ಚದರಡಿ ವಿಸ್ತೀರ್ಣದಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ 15 ತರಗತಿ ಕೊಠಡಿಗಳು, ಕಂಪ್ಯೂಟರ್ ಕೊಠಡಿ, ಮುಖ್ಯಶಿಕ್ಷಕರ ಮತ್ತು ಸಿಬ್ಬಂದಿ ಕೊಠಡಿ, ಗ್ರಂಥಾಲಯ, ವಿವಿಧ ಉದ್ದೇಶಗಳಿಗಾಗಿ ಸಭಾಂಗಣ ಹಾಗೂ ಶೌಚಾಲಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಅಲ್ಲದೆ, ಪೀಠೋಪಕರಣಗಳು ಮತ್ತು ಪಾಠೋಪಕರಣಗಳ ಜೊತೆಗೆ ಮಕ್ಕಳಿಗೆ ಸಮವಸ್ತ್ರ, ಶೂ, ಬ್ಯಾಗ್ ಮತ್ತು ನೋಟ್‌ ಪುಸ್ತಕ ಮತ್ತಿತರ ಸೌಕರ್ಯಗಳನ್ನು ಒದಗಿಸಲಾಗಿದೆ.

ಶಾಲೆಯಲ್ಲಿ ಒಟ್ಟು 700 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕಳೆದ 4 ವರ್ಷದಿಂದ 6, 7 ಮತ್ತು 8ನೇ ತರಗತಿಯವರೆಗೆ ಆಂಗ್ಲಮಾಧ್ಯಮ ಶಿಕ್ಷಣ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT