ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ವಿವರ ಸಲ್ಲಿಸದ 55 ಪಾಲಿಕೆ ಸದಸ್ಯರು

Last Updated 18 ಅಕ್ಟೋಬರ್ 2019, 19:56 IST
ಅಕ್ಷರ ಗಾತ್ರ

ಬೆಂಗಳೂರು: ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಆಸ್ತಿ ವಿವರ ಘೋಷಿಸಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಆದೇಶಿಸಿದ್ದರೂ ಬೆಂಗಳೂರು ಮಹಾನಗರ ಪಾಲಿಕೆಯ ಸುಮಾರು 55 ಸದಸ್ಯರು ತಮ್ಮ ಆಸ್ತಿ ವಿವರ ಘೋಷಣೆ ಮಾಡಿಲ್ಲ.

ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸಬೇಕು ಎಂದು ಕಳೆದ ಜುಲೈ 28ರಂದು ಲೋಕಾಯುಕ್ತರು ಆದೇಶಿಸಿದ್ದರು. ಆಸ್ತಿ ವಿವರಗಳನ್ನು ಘೋಷಣೆ ಮಾಡಲು ಸೆಪ್ಟೆಂಬರ್ 26ರವರೆಗೆ ಗಡುವು ನೀಡಿದ್ದರು. ಆದರೆ, ಪಾಲಿಕೆಯ 143 ಸದಸ್ಯರು ಮಾತ್ರ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ.

ಕೆಲವು ಮಾಜಿ ಮೇಯರ್‌ಗಳೂ ಸೇರಿದಂತೆ 46 ಸದಸ್ಯರು ಆಸ್ತಿ ವಿವರ ಘೋಷಣೆ ಮಾಡಿಲ್ಲ. ಆಸ್ತಿ ವಿವರ ಸಲ್ಲಿಸದ ಸದಸ್ಯರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎಚ್‌.ಎಂ. ವೆಂಕಟೇಶ್‌ ಮನವಿ ಮಾಡಿದ್ದಾರೆ. ವೆಂಕಟೇಶ್‌ ಅವರು ಸಲ್ಲಿಸಿದ್ದ ಅರ್ಜಿಯ ಮೇಲೆ ವಿಶ್ವನಾಥ ಶೆಟ್ಟಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳೂ ಆಸ್ತಿ ವಿವರಗಳನ್ನು ಸಲ್ಲಿಸಬೇಕೆಂದು ಆದೇಶಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT