ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಜಾಗ್ರತೆ ಕೈಗೊಳ್ಳಲು ಸಿಬ್ಬಂದಿಗೆ ತರಬೇತಿ

Last Updated 24 ಮಾರ್ಚ್ 2020, 11:35 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಸೋಂಕು ಹರಡುವುದು ತಡೆಗಟ್ಟಲು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ವಿವಿಧ ಇಲಾಖೆಗಳ ಅಧಿಕಾರಿಗಳ ತಂಡಗಳನ್ನು ರಚನೆ ಮಾಡಿದೆ.

ಸೋಮವಾರ ಜಿಲ್ಲಾಡಳಿತ ಭವನದ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಖಜಾನೆ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಿಬ್ಬಂದಿಗೆ ಸೋಂಕು ಹರಡುವುದು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತರಬೇತಿ ನೀಡಲಾಯಿತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹರೀಶ್, ಆರೋಗ್ಯ ಉಪಶಿಕ್ಷಣಾಧಿಕಾರಿ ಸುಧಾ, ಆರ್.ಸಿ.ಹೆಚ್. ಅಧಿಕಾರಿ ಡಾ.ಚನ್ನಕೇಶವರೆಡ್ಡಿ, ಆರೋಗ್ಯ ಇಲಾಖೆಯ ಸಿಬ್ಬಂದಿ ವಿನೋದ್, ನಯಾಜ್, ರಾಘವೇಂದ್ರ ರೆಡ್ಡಿ, ಮೋಹನ್ ತರಬೇತಿಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT