ಶುಕ್ರವಾರ, ಡಿಸೆಂಬರ್ 13, 2019
17 °C

ಆ್ಯಪ್‌ ಮೂಲಕ ಕ್ರಿಕೆಟ್ ಬೆಟ್ಟಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೊಬೈಲ್ ಆ್ಯಪ್ ಮೂಲಕ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ಅಮಿತ್‍ಕುಮಾರ್ (32) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಭಾರತ–ಬಾಂಗ್ಲಾದೇಶ ನಡುವಿನ ಕ್ರಿಕೆಟ್ ಪಂದ್ಯದ ವೇಳೆ ಆರೋಪಿ ಬೆಟ್ಟಿಂಗ್ ನಡೆಸುತ್ತಿದ್ದ. ಆತನಿಂದ ₹ 1.36 ಲಕ್ಷ ನಗದು ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

‘ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಆರೋಪಿ ಎರಡೂ ತಂಡಗಳ ಗೆಲುವು ಹಾಗೂ ಸೋಲಿನ ಲೆಕ್ಕಾಚಾರದಲ್ಲಿ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ. ಆ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಲಾಯಿತು’ ಎಂದರು.

 

ಪ್ರತಿಕ್ರಿಯಿಸಿ (+)