ಸೋಮವಾರ, ಅಕ್ಟೋಬರ್ 21, 2019
24 °C
ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಹೇಳಿಕೆ

ವೈದ್ಯಕೀಯ ಸೀಟು ಮಾರಾಟ: ಕ್ರಮದ ಎಚ್ಚರಿಕೆ

Published:
Updated:

ಬೆಂಗಳೂರು: ‘ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಡೀಮ್ಡ್‌ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ಸೀಟು ಮಾರಾಟ ದಂಧೆ (ಸೀಟ್‌ ಬ್ಲಾಕಿಂಗ್‌) ನಡೆಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಎಚ್ಚರಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್‌ ಶಾಸಕ ಜಿ.ಪರಮೇಶ್ವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಕ್ಕೂ, ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ’ ಎಂದರು.

‘ಯಾರು ಆದಾಯ ತೆರಿಗೆ ಪಾವತಿಸಿಲ್ಲವೋ, ಅವರ ಮನೆ ಮತ್ತು ಸಂಸ್ಥೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಾರೆ. ಇದರಲ್ಲಿ ಸರ್ಕಾರದ ಪಾತ್ರವಿರುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

2018ನೇ ಸಾಲಿನ ಪ್ರವೇಶಾತಿ ವೇಳೆ, 8 ಖಾಸಗಿ ವೈದ್ಯಕೀಯ ಕಾಲೇಜು ಮತ್ತು 212 ವಿದ್ಯಾರ್ಥಿಗಳು ಸೀಟು ಮಾರಾಟ ದಂಧೆಯಲ್ಲಿ ಪಾಲ್ಗೊಂಡ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ, ‘ಈ ಕುರಿತು ಮಾಹಿತಿ ಪಡೆದು, ಕಾನೂನಿನನ್ವಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.

Post Comments (+)