ಭಾನುವಾರ, ಏಪ್ರಿಲ್ 5, 2020
19 °C

ಪ್ರತ್ಯೇಕ ಮಕ್ಕಳ ಇಲಾಖೆ ರಚನೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮಕ್ಕಳ ಹಕ್ಕುಗಳ ರಕ್ಷಣೆಗಾಗಿ, ಈಗಿರುವ ಮಹಿಳಾ ಮತ್ತು ಮಕ್ಕಳ ಸಚಿವಾಲಯವನ್ನು ಇಬ್ಭಾಗಗೊಳಿಸಿ, ಮಕ್ಕಳಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಪ್ರಾರಂಭಿಸಬೇಕು’ ಎಂದು ಕ್ರಿಸ್ಪ್‌ ಸಂಸ್ಥೆಯ ನೀರಜ್‌ ಆಗ್ರಹಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪೊಕ್ಸೊ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಪೊಲೀಸ್‌ ಠಾಣೆ ಮತ್ತು ಸರ್ಕಾರಿ ಕಚೇರಿಗಳಲ್ಲಿ ಪೋಸ್ಟರ್‌ಗಳ ಮೂಲಕ ಜಾಗೃತಿ ಮೂಡಿಸಬೇಕು’ ಎಂದರು.

‘ಗಾರ್ಡಿಯನ್ಸ್‌ ಆ್ಯಂಡ್‌ ವಾರ್ಡ್ಸ್ ಕಾಯಿದೆಗೆ ಕೂಡಲೇ ತಿದ್ದುಪಡಿ ತಂದು, ತಂದೆ–ತಾಯಿ ಇಬ್ಬರಿಗೂ ಮಕ್ಕಳ ಸಮಾನಾದ ಪೋಷಣೆಯ ಅವಕಾಶವನ್ನು ನೀಡಬೇಕು’ ಎಂದು ಒತ್ತಾಯಿಸಿದರು.

‘ಈ ಬಾರಿಯ ಮಕ್ಕಳ ದಿನಾಚರಣೆ ನಿಮಿತ್ತ, ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ’ ಎಂದು ಕ್ರಿಸ್ಪ್ ಸಂಸ್ಥೆಯ ಸಂಸ್ಥಾಪಕ ಕುಮಾರ್‌ ಜಹಗೀರ್‌ದಾರ್‌ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು