ಸೇವಾ ಭದ್ರತೆಗೆ ಒತ್ತಾಯ

7

ಸೇವಾ ಭದ್ರತೆಗೆ ಒತ್ತಾಯ

Published:
Updated:

ಬೆಂಗಳೂರು: ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಎಲ್ಲಾ ವರ್ಗದ ನೌಕರರಿಗೂ ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಇದೇ 12ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಹಮ್ಮಿಕೊಳ್ಳಲಾಗುತ್ತದೆ’ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ–ಬ್ಯಾಂಕುಗಳ ಕ್ಷೇಮಾಭಿವೃದ್ಧಿ ಮಹಾಮಂಡಲದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಸ್‌.ಬಡಗಿಗೌಡರ್‌ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಸುಮಾರು ವರ್ಷಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ರೈತರ ಎಲ್ಲಾ ಕೆಲಸಗಳನ್ನು ಮಾಡುತ್ತಿವೆ. ಆದರೂ ಅವರಿಗೇ ಸೇವಾ ಭದ್ರತೆ ಇಲ್ಲ. ಈ ಬಗ್ಗೆ ಅನೇಕ ಬಾರಿ ಪ್ರತಿಭಟನೆ ಮಾಡಲಾಗಿದೆ. ಸಹಕಾರ ಸಚಿವರಿಗೂ ಮನವರಿಕೆ ಮಾಡಲಾಗಿದೆ. ಆದರೂ, ಗಮನಹರಿಸಿಲ್ಲ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !