ಸೋಮವಾರ, ಏಪ್ರಿಲ್ 12, 2021
22 °C

ರಾಜ್ಯದಲ್ಲಿ ಡೆಂಗಿಗೆ ಮೂವರು ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜನವರಿಯಿಂದ ಈವರೆಗೆ (ಜುಲೈ 22) ರಾಜ್ಯದಲ್ಲಿ ಮೂವರು ಡೆಂಗಿಯಿಂದ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ರಾಮನಗರದಲ್ಲಿ ಫೆಬ್ರುವರಿ 15ರಂದು, ಚಿತ್ರದುರ್ಗದಲ್ಲಿ ಮೇ 20ರಂದು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್‌ 26ರಂದು ತಲಾ ಒಬ್ಬರು ಡೆಂಗಿಗೆ ಬಲಿಯಾಗಿದ್ದಾರೆ ಎಂದು ರಾಜ್ಯಮಟ್ಟದ ಸಾವುಗಳ ಲೆಕ್ಕಪರಿಶೀಲನಾ ಸಮಿತಿ ದೃಢಪಡಿಸಿದೆ. ಈ ಅವಧಿಯಲ್ಲಿ ಒಟ್ಟು 19,784 ಶಂಕಿತ ಡೆಂಗಿ ಪ್ರಕರಣಗಳು ಪತ್ತೆಯಾಗಿದ್ದು, 13,175 ರೋಗಿಗಳ ರಕ್ತದ ಮಾದರಿ ಸಂಗ್ರಹಿಸಲಾಗಿತ್ತು. ಈ ಪೈಕಿ, 1,926 ಜನರಿಗೆ ಡೆಂಗಿ ಇದೆ. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 64, 613 ಶಂಕಿತ ಡೆಂಗಿ ಪ್ರಕರಣ ಪತ್ತೆಯಾಗಿದ್ದು, 15,683 ರೋಗಿಗಳ ರಕ್ತದ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 3,393 ಜನರಿಗೆ ಡೆಂಗಿ ಇರುವುದು ದೃಢಪಟ್ಟಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು