ಬುಧವಾರ, ಸೆಪ್ಟೆಂಬರ್ 22, 2021
25 °C

‘ಮಾನಸಿಕ ಸ್ಥಿಮಿತ ಕಳೆದುಕೊಂಡ ಈಶ್ವರಪ್ಪ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ‘ಅತ್ಯಾಚಾರದ ಬಗ್ಗೆ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪನವರ ಹೇಳಿಕೆ ನೋಡಿದರೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಂತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಶ್ವರಪ್ಪನವರ ಮನಸ್ಸಿನಲ್ಲಿ ಒಳ್ಳೆಯ ವಿಚಾರಗಳು ಇವೆಯೋ, ಇಲ್ಲವೋ ಗೊತ್ತಿಲ್ಲ. ಮಹಿಳೆಯರಿಗೆ ಅವಮಾನ ಮಾಡುವ ರೀತಿಯಲ್ಲಿ ಅವರು ಮಾತನಾಡಿದ್ದಾರೆ. ತಮ್ಮ ಹೇಳಿಕೆ ಬಗ್ಗೆ ಈಶ್ವರಪ್ಪವರು ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಬಿಜೆಪಿಯವರು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಕುಂದಗೋಳದಲ್ಲಿ ಈಚೆಗೆ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಈಶ್ವರಪ್ಪ, ‘ನಿನ್ನ ಮೊಮ್ಮಗಳ ಮೇಲೆ ಅತ್ಯಾಚಾರವಾಗಿದ್ದರೆ ಏನು ಮಾಡ್ತೀಯಾ’ ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು