ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಳಿನ್, ಹೆಗಡೆ, ಸಾಧ್ವಿ ನಾಲಾಯಕ್‌ಗಳು: ದಿನೇಶ್‌ ಗುಂಡೂರಾವ್‌ ವಾಗ್ದಾಳಿ

‘ನಾಥೂರಾಂ ಗೋಡ್ಸೆ ದೇಶಭಕ್ತ’ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
Last Updated 18 ಮೇ 2019, 20:04 IST
ಅಕ್ಷರ ಗಾತ್ರ

ಬೆಂಗಳೂರು: ‘ಹಿಂದುತ್ವದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಒಬ್ಬ ದೇಶದ್ರೋಹಿ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ವಾಗ್ದಾಳಿ ನಡೆಸಿದರು.

ನಾಥೂರಾಂ ಗೋಡ್ಸೆ ದೇಶಭಕ್ತ ಎಂಬ ಸಾಧ್ವಿ ಪ್ರಜ್ಞಾ ಸಿಂಗ್ ಹೇಳಿಕೆ ಮತ್ತು ಸಂಸದರಾದ ನಳಿನ್‌ ಕುಮಾರ್ ಕಟೀಲ್, ಅನಂತ್ ಕುಮಾರ್ ಹೆಗಡೆ ಸಮರ್ಥನೆ ಖಂಡಿಸಿ ಕಾಂಗ್ರೆಸ್‌ ವತಿಯಿಂದ ಮೌರ್ಯ ವೃತ್ತದಲ್ಲಿ ಶನಿವಾರ ನಡೆದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.

‘ಮೋದಿ ಅವರು ಇನ್ನೂ ಐದು ವರ್ಷ ಪ್ರಧಾನಿಯಾದರೆ, ದೇಶದಲ್ಲಿ ಎಲ್ಲೂ ಗಾಂಧಿ ಪ್ರತಿಮೆಗಳು ಇರುವುದಿಲ್ಲ. ಗಾಂಧಿ ಪ್ರತಿಮೆಗಳಿದ್ದ ಕಡೆಗಳಲ್ಲಿ ಗೋಡ್ಸೆ ಪ್ರತಿಮೆ ಅನಾವರಣ ಮಾಡುತ್ತಾರೆ’ ಎಂದ ದಿನೇಶ್‌, ‘ನಳಿನ್ ಕುಮಾರ್‌ ಕಟೀಲ್, ಅನಂತಕುಮಾರ್ ಹೆಗಡೆ ಮತ್ತು ಸಾಧ್ವಿ ನಾಲಾಯಕ್‌ಗಳು. ಅವರನ್ನು ವಜಾ ಮಾಡಿ’ ಎಂದು ಆಗ್ರಹಿಸಿದರು.

‘ನಳಿನ್‌ ಮತ್ತು ಅನಂತ್ ಕುಮಾರ್ ಹೆಗಡೆ ನಿಜವಾದ ಭಯೋತ್ಪಾದಕರು’ ಎಂದು ಕಾಂಗ್ರೆಸ್‌ ಮುಖಂಡ ಬೇಳೂರು ಗೋಪಾಲಕೃಷ್ಣ ದೂರಿದರು.

‘ಗೋಡ್ಸೆಯ ಅನುಯಾಯಿ ಹಾಗೂ ಆರಾಧಕ ಮೋದಿ. ಹೆಣ್ಣು‌ ಮಕ್ಕಳನ್ನು ನಾನು ಗೌರವಿಸುತ್ತೇನೆ. ಆದರೆ, ಸಾಧ್ವಿ ಪ್ರಜ್ಞಾ ಸಿಂಗ್‌ ಭಯೋತ್ಪಾದಕಿ. ಹೀಗಾಗಿ, ಆಕೆಗೆ ಗೌರವ ಕೊಡುವುದಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT