ಬುಧವಾರ, ನವೆಂಬರ್ 13, 2019
23 °C

ಡಿಕೆಶಿ ಬಂಧನ: ಸೇಡಿನ ರಾಜಕಾರಣ: ಖಂಡನಾ ಸಭೆಯಲ್ಲಿ ಆರೋಪ

Published:
Updated:
Prajavani

ರಾಜರಾಜೇಶ್ವರಿನಗರ: ‘ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಕಾನೂನು ರೀತಿಯಲ್ಲಿ ವಿಚಾರಣೆ ಮಾಡಲಿ, ಆದರೆ, ಮಾನಸಿಕವಾಗಿ ಚಿತ್ರಹಿಂಸೆ ನೀಡಿ ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಒಕ್ಕಲಿಗರ ಸಂಘದ ನಿರ್ದೇಶಕ ಕೆ.ಕೃಷ್ಣಮೂರ್ತಿ ಹೇಳಿದರು.

ಶಿವಕುಮಾರ್ ಬಂಧನ ವಿರೋಧಿಸಿ ಒಕ್ಕಲಿಗ ಸಮುದಾಯದ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ಭಾನುವಾರ ನಡೆದ ಖಂಡನಾ ಸಭೆಯಲ್ಲಿ ಮಾತನಾಡಿ, ‘ಬಿಜೆಪಿಗೆ ಸೇರಲು ನಿರಾಕರಿಸಿದ ಕಾರಣಕ್ಕೆ ಪ್ರಧಾನಿ ನರೇಂದ್ರಮೋದಿ, ಗೃಹ ಸಚಿವ ಅಮಿತ್‍ ಶಾ ಸೇಡಿನ ರಾಜಕೀಯ ಮಾಡುತ್ತಿದ್ದಾರೆ’ ಎಂದರು.

ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣಗೌಡ, ‘ಶಿವಕುಮಾರ್ ಬಂಧನ ಖಂಡಿಸಿ ಪಕ್ಷಾತೀತ, ಜಾತ್ಯತೀತವಾಗಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗಿದೆ. ಈ ಸಂಬಂಧ ಸೆಪ್ಟೆಂಬರ್ 11ರಂದು ನ್ಯಾಷನಲ್ ಕಾಲೇಜು ಆವರಣದಲ್ಲಿ ಸಭೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದರು.

ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ, ವಿಧಾನಪರಿಷತ್ ಸದಸ್ಯ ಎಸ್.ರವಿ, ಕಾಂಗ್ರೆಸ್ ಮುಖಂಡ ಸೋಲೂರು ಕಾಂತರಾಜು, ಒಕ್ಕಲಿಗರ ಸಂಘದ ನಿರ್ದೇಶಕ ಜಯಮುತ್ತು ಮತ್ತಿತರರು ಇದ್ದರು.

ಪ್ರತಿಕ್ರಿಯಿಸಿ (+)