ಕ್ಯಾಬ್‌ಗಳಿಗೆ ಪರವಾನಗಿ ನೀಡಬೇಡಿ: ಪೊಲೀಸರ ಮನವಿ

7

ಕ್ಯಾಬ್‌ಗಳಿಗೆ ಪರವಾನಗಿ ನೀಡಬೇಡಿ: ಪೊಲೀಸರ ಮನವಿ

Published:
Updated:

ಬೆಂಗಳೂರು: ಮೊಬೈಲ್ ಆ್ಯಪ್ ಆಧಾರಿತ ಕ್ಯಾಬ್‌ಗಳ ಸಂಖ್ಯೆ ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅವುಗಳಿಂದಾಗಿ ಸಂಚಾರ ದಟ್ಟಣೆ ವಿಪರೀತವಾಗುತ್ತಿದೆ. ಅದೇ ಕಾರಣಕ್ಕೆ, ಮುಂಬರುವ ದಿನಗಳಲ್ಲಿ ಕ್ಯಾಬ್‌ಗಳಿಗೆ ಹೊಸ ಪರವಾನಗಿ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಸಂಚಾರ ಪೊಲೀಸರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

‘ನಗರದಲ್ಲಿ 78.84 ಲಕ್ಷ ವಾಹನಗಳಿದ್ದು, ಶೇ 85ರಷ್ಟು ವಾಹನಗಳು ಸಂಚರಿಸುತ್ತಿವೆ. ಅದರಲ್ಲಿ 3.50 ಲಕ್ಷ ಕ್ಯಾಬ್‌ಗಳಿದ್ದು, ಅವುಗಳಿಗೆ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ಅವುಗಳಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆ ನಿಯಂತ್ರಿಸುವುದಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಸಂಚಾರ) ಪಿ.ಹರಿಶೇಖರನ್ ತಿಳಿಸಿದರು.

‘ಎಲ್ಲ ಮೆಟ್ರೊ ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್‍) ಮನವಿ ಮಾಡಲಾಗಿದೆ. ದೋಷಪೂರಿತ ನೋಂದಣಿ ಫಲಕಗಳ ಪತ್ತೆಗಾಗಿ ನಗರದ ಕೆಲವು ಜಂಕ್ಷನ್ ಹಾಗೂ ವೃತ್ತಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !