ಸರ್ಕಾರ ಭರವಸೆ ಉಳಿಸಿಕೊಂಡಿಲ್ಲ: ದೊರೆಸ್ವಾಮಿ ಆಕ್ರೋಶ

7

ಸರ್ಕಾರ ಭರವಸೆ ಉಳಿಸಿಕೊಂಡಿಲ್ಲ: ದೊರೆಸ್ವಾಮಿ ಆಕ್ರೋಶ

Published:
Updated:
ಎಚ್‌.ಎಸ್‌.ದೊರೆಸ್ವಾಮಿ

ಬೆಂಗಳೂರು: ‘ನಗರದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿದ್ದರೂ ಸರ್ಕಾರ ಗಮನಹರಿಸುತ್ತಿಲ್ಲ. ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ’ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

‘ಬೆಂಗಳೂರನ್ನು ಉಳಿಸಿ’ ಅಭಿಯಾನದ ಅಂಗವಾಗಿ ಯುನೈಟೆಡ್‌ ಬೆಂಗಳೂರು ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೆರೆ ಒತ್ತುವರಿ ತೆರವುಗೊಳಿಸುವ ಜತೆಗೆ ವಸತಿ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ತಡೆಯುವುದಾಗಿ ಸರ್ಕಾರ ಭರವಸೆ ನೀಡಿತ್ತು. ಇಲ್ಲಿಯವರೆಗೂ ಈ ಕುರಿತು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಸರ್ಕಾರದ ಇಲಾಖೆಗಳಲ್ಲಿಯೇ ಭ್ರಷ್ಟಾಚಾರ ಹೆಚ್ಚುತ್ತಿದೆ. ಇದರ ಬಗ್ಗೆ ಅರಿವು ಇದ್ದರೂ ನಿರ್ಲಕ್ಷಿಸಲಾಗುತ್ತಿದೆ’ ಎಂದು ದೂರಿದರು.

‘ಸಾಕಷ್ಟು ಸಮಸ್ಯೆಗಳ ಕುರಿತು ಯುನೈಟೆಡ್‌ ಬೆಂಗಳೂರು ಸಂಸ್ಥೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದೆ. ಸಾರ್ವಜನಿಕರ ಹಣವನ್ನು ಬಳಸಿಕೊಂಡು ಮಾಡುವ ಅಭಿವೃದ್ಧಿ ಕೆಲಸಗಳಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸುವಂತೆ ಒತ್ತಾಯಿಸಿದೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !