ಶಿಕ್ಷಣಕ್ಕೆ ಹಣ ಅಡ್ಡಿಯಾಗದಿರಲಿ: ಡಾ.ಅಪ್ಪಗೆರೆ ತಿಮ್ಮರಾಜು

7

ಶಿಕ್ಷಣಕ್ಕೆ ಹಣ ಅಡ್ಡಿಯಾಗದಿರಲಿ: ಡಾ.ಅಪ್ಪಗೆರೆ ತಿಮ್ಮರಾಜು

Published:
Updated:
Prajavani

ಬೆಂಗಳೂರು: ‘ಆರ್ಥಿಕ ಸಮಸ್ಯೆಗೆ ಅಂಜಿ ಶಿಕ್ಷಣವನ್ನು ಮೊಟಕುಗೊಳಿಸಬಾರದು.ವಿದ್ಯೆಗೆ ಸಹಾಯ ಹಸ್ತ ಚಾಚುವ ಅದೆಷ್ಟೋ ಮನಸ್ಸುಗಳು ನಮ್ಮ ನಡುವೆಯೇ ಇದೆ’ ಎಂದು ಜನಪದ ಗಾಯಕ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ಡಾ.ಅಪ್ಪಗೆರೆ ತಿಮ್ಮರಾಜು ಹೇಳಿದರು.

ಕೆಂಗೇರಿಯ ಶೇಷಾದ್ರಿಪುರಂ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸಾಮಾಜಿಕ ತತ್ವ ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ‘ಶಿಕ್ಷಣವೇ ಶಕ್ತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಶಿಕ್ಷಣ ಪಡೆಯಲು ಆರ್ಥಿಕ ತೊಂದರೆ ಉಂಟಾದಲ್ಲಿ ಟ್ರಸ್ಟ್‌ಗಳ ಮೂಲಕ ಸಹಾಯವನ್ನು ಪಡೆಯಲು ಹಿಂಜರಿಯಬಾರದು ಎಂದು ಕಿವಿಮಾತು ಹೇಳಿದರು. ಶೈಕ್ಷಣಿಕ ಉದ್ದೇಶಗಳಿಗಾಗಿ ಧನ ಸಹಾಯಕ್ಕೆ ಮುಂದಾಗಿರುವ ಸಾಮಾಜಿಕ ತತ್ವ ಚಾರಿಟಬಲ್ ಟ್ರಸ್ಟ್ ಕಾರ್ಯ ಶ್ಲಾಘನೀಯ’ ಎಂದರು.

ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ರಾಜ್ ಕುಮಾರ್ ಮಾತನಾಡಿ, ‘ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳನ್ನು ದತ್ತು ಪಡೆದು ಉನ್ನತ ಶಿಕ್ಷಣ ನೀಡಲು ಯೋಜನೆ ರೂಪಿಸಲಾಗಿದೆ’ ಎಂದು ಅಧ್ಯಕ್ಷ ಮುನಿಕೃಷ್ಣ ಹೇಳಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ಕೋಡಿ
ಪಾಳ್ಯ ಮತ್ತು ಅರುಂಧತಿನಗರ ವ್ಯಾಪ್ತಿಯ ಹಲವು ಸರ್ಕಾರಿ ಶಾಲೆಗಳಿಗೆ ಸುಮಾರು 500 ಸ್ಕೂಲ್ ಬ್ಯಾಗ್ ವಿತರಣೆ ಮಾಡಲಾಯಿತು.

ಎಪಿಎಂಸಿ ನಿರ್ದೇಶಕ ಎಂ ಜಯಕುಮಾರ್, ಶೇಷಾದ್ರಿಪುರಂ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಡಿ.ಸತೀಶ್, ಬಿಬಿಎಂಪಿ ನಾಮನಿರ್ದೇಶಿತ ಸದಸ್ಯ ಜಿ.ವಿ.ಸುರೇಶ್, ಅನುಪಮಾ ಪಂಚಾಕ್ಷರಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !