₹4.5 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

ಶನಿವಾರ, ಏಪ್ರಿಲ್ 20, 2019
27 °C

₹4.5 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

Published:
Updated:
Prajavani

ಬೆಂಗಳೂರು: ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ನೈಜೀರಿಯಾ ಪ್ರಜೆಯೊಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆತನಿಂದ ₹4.5 ಲಕ್ಷ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ.

‘ಪೀಟರ್ ಓಬಿಡಿ (27) ಬಂಧಿತ. ನಗರದ ಹೆಣ್ಣೂರು ಬಳಿಯ ಬಾಬುಸಾಪಾಳ್ಯದಲ್ಲಿ ವಾಸವಿದ್ದ ಆತ, ಮನೆಯಲ್ಲೇ ಡ್ರಗ್ಸ್‌ ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುತ್ತಿದ್ದ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.

‘ವೀಸಾ ಅವಧಿ ಮುಕ್ತಾಯವಾಗಿದ್ದರೂ ಆರೋಪಿ ವಾಪಸ್‌ ಹೋಗಿರಲಿಲ್ಲ. ದೇಶದಲ್ಲಿ ಅಕ್ರಮವಾಗಿ ನೆಲೆಸಿ ವೀಸಾ ನಿಯಮಗಳನ್ನು ಉಲ್ಲಂಘಿಸಿ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ.’

‘ಯುವಕ–ಯುವತಿಯರು, ಕಾಲೇಜು ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಆರೋಪಿಯು ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ಅದರಿಂದ ಬಂದ ಹಣವನ್ನು ಐಷಾರಾಮಿ ಜೀವನಕ್ಕೆ ಖರ್ಚು ಮಾಡುತ್ತಿದ್ದ’ ಎಂದು ಅಧಿಕಾರಿ ಹೇಳಿದರು.

‘ಭಾನುವಾರ ಬೆಳಿಗ್ಗೆ ಆರೋಪಿಯ ಮನೆ ಮೇಲೆ ದಾಳಿ ನಡೆಸಲಾಯಿತು. ಮನೆಯಲ್ಲಿದ್ದ 55 ಗ್ರಾಂ ತೂಕದ ಎಂ.ಡಿ.ಎಂ.ಎ ಡ್ರಗ್ಸ್‌ ಹಾಗೂ ₹20 ಸಾವಿರ ನಗದು ಜಪ್ತಿ ಮಾಡಲಾಯಿತು’ ಎಂದು ಅವರು ವಿವರಿಸಿದರು.  

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !