ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ‌ಪ್ರತಿಭಟನೆ

7

ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ‌ಪ್ರತಿಭಟನೆ

Published:
Updated:

ಬೆಂಗಳೂರು: ಹಕ್ಕುಪತ್ರಗಳನ್ನು ವಿತರಿಸದೆ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ಧೋರಣೆ ಖಂಡಿಸಿ ಇದೇ 28ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ‘ದಲಿತ ಸಂಘರ್ಷ ಸಮಿತಿ’ ಪ್ರತಿಭಟನೆ ನಡೆಸಲಿದೆ.

‘‌ಯಲಹಂಕ, ಬೆಂಗಳೂರು ದಕ್ಷಿಣ ಮತ್ತು ಉತ್ತರದಲ್ಲಿ ದಲಿತ ಬಡವರಿಗೆ‌ ಗುರುತಿಸಿರುವ ಗೋಮಾಳ ಜಮೀನನ್ನು ‌ವಿತರಿಸುವಂತೆ ಕಂದಾಯ ಸಚಿವರು ಆದೇಶಿಸಿದ್ದರೂ ಅಧಿಕಾರಿಗಳು ಹಕ್ಕುಪತ್ರ ನೀಡದೆ ವಂಚಿಸಿದ್ದಾರೆ. ಸರ್ಕಾರಿ ಜಾಗಗಳನ್ನು ಲಪಟಾಯಿಸಲು ಭೂಗಳ್ಳರು ಅಧಿಕಾರಿಗಳೊಂದಿಗೆ ಶಾಮೀಲಾಗಿದ್ದಾರೆ’ ಎಂದು ಸಮಿತಿಯ ಅಧ್ಯಕ್ಷ ಎಚ್‌.ಮಾರಪ್ಪ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಹಕ್ಕುಪತ್ರಗಳನ್ನು ವಿತರಿಸುವಂತೆ ಒತ್ತಾಯಿಸಿ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !