25ರಂದು ದಲಿತ ಸಮಾವೇಶ

7

25ರಂದು ದಲಿತ ಸಮಾವೇಶ

Published:
Updated:

ಬೆಂಗಳೂರು: ದಲಿತ ಸಂಘಟನೆಗಳ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇದೇ 25ರಂದು ದಲಿತ ಸಮಾವೇಶವನ್ನು ಆಯೋಜಿಸಿದೆ.

ಅಂದು ಬೆಳಿಗ್ಗೆ ಟೌನ್‌ ಹಾಲ್‌ನಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಬಳಿಕ ಸಮಾವೇಶ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ‘10 ತಿಂಗಳು ಕಳೆದರೂ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಆಯೋಗಗಳಿಗೆ ಅಧ್ಯಕ್ಷರ ನೇಮಕ ಮಾಡಿಲ್ಲ. ಆದ್ದರಿಂದ ದೂರುಗಳು ವಿಲೇವಾರಿಯಾಗದೆ ಉಳಿದಿವೆ.

ಬಡ್ತಿ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಸರ್ಕಾರ ದಲಿತ ವಿರೋಧಿಯಾಗಿ ವರ್ತಿಸುತ್ತಿದೆ’ ಎಂದು ಆರೋಪಿಸಿದರು. ‘ಉಪಜಾತಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಬೇಕು. ಯೋಜನೆಗಳಡಿ ಫಲಾನುಭವಿಗಳ ಆಯ್ಕೆಗಿರುವ ಶಾಸಕರಅಧ್ಯಕ್ಷತೆಯ ಸಮಿತಿ ರದ್ದುಪಡಿಸಬೇಕು. 500 ಜನಸಂಖ್ಯೆಗೆ ಒಬ್ಬ ಪೌರಕಾರ್ಮಿಕರನ್ನು ನೇಮಿಸಬೇಕು ಎನ್ನುವುದು ಬೇಡಿಕೆಗಳಾಗಿವೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !